Anganwadi Jobs: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆ; ಎಲ್ಲಿ, ಎಷ್ಟು ಹುದ್ದೆ? ಇಲ್ಲಿದೆ ಸಂಪೂರ್ಣ ವಿವರ

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಮಾಹಿತಿ ಇಲ್ಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (Women and Child Development Department) ಇಲಾಖೆ ಅಡಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾದಗಿರಿ, ಉಡುಪಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಇದಕ್ಕಾಗಿ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಮಾಹಿತಿ ಇಲ್ಲಿದೆ.

    ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ
    ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
    ಹುದ್ದೆಗಳ ಸಂಖ್ಯೆ: 341
    ಉದ್ಯೋಗ ಸ್ಥಳ: ಉಡುಪಿ, ಯಾದಗಿರಿ, ಬೆಳಗಾವಿ
    ವೇತನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿಯ ನಿಯಮಗಳ ಪ್ರಕಾರ



















    ಜಿಲ್ಲೆಹುದ್ದೆ ಸಂಖ್ಯೆ
    ಉಡುಪಿ25
    ಯಾದಗಿರಿ34
    ಬೆಳಗಾವಿ282

    ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಭಾರತೀಯ ರೈಲ್ವೆಯಲ್ಲಿ 60 ಹುದ್ದೆಗಳ ನೇಮಕಾತಿ; ಡಿಗ್ರಿ ಆದವರು ಅರ್ಜಿ ಸಲ್ಲಿಸಿ

    ವಯೋಮಿತಿ ಸಡಿಲಿಕೆ:
    ಅಂಗವಿಕಲ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷಗಳು

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ಲಿಂಕ್​ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: anganwadirecruit.kar.nic.in

    ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
    ಭರ್ತಿ ಮಾಡಿದ ಅರ್ಜಿ ನಮೂನೆ
    ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿ
    ವಾಸಸ್ಥಳದ ದೃಢೀಕರಣ
    ವಿದ್ಯಾರ್ಹತೆ ಪ್ರಮಾಣಪತ್ರ
    ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
    ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ.

    ಇದನ್ನು ಓದಿ: ಚಾಮರಾಮನಗರದಲ್ಲಿ ಹಿರಿಯ ವಿಶ್ಲೇಷಕ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
    Published by:Seema R
    First published: