Anganwadi Recruitment: ಉಡುಪಿ ಜಿಲ್ಲೆಯಲ್ಲಿ 25 ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ ನಗರಸಭೆ, ಬ್ರಹ್ಮಾವರದ ಕೊಡಿ ಮತ್ತು ಕುಂದಾಪುರದ ಕಳವಾರ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಅಂಗನವಾಡಿ ಕೇಂದ್ರಗಳಲ್ಲಿ ಈ ಹುದ್ದೆ ಖಾಲಿ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (Women and Child Development Department) ಇಲಾಖೆ ಅಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ(Udupi District) ಕಾರ್ಯ ನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ 25 ಹುದ್ದೆಗಳು ಖಾಲಿ ಇದ್ದು, ಇದಕ್ಕಾಗಿ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 20 ಆಗಿದೆ.

    ಉಡುಪಿ ನಗರಸಭೆ, ಬ್ರಹ್ಮಾವರದ ಕೊಡಿ ಮತ್ತು ಕುಂದಾಪುರದ ಕಳವಾರ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಅಂಗನವಾಡಿ ಕೇಂದ್ರಗಳಲ್ಲಿ ಈ ಹುದ್ದೆ ಖಾಲಿ ಇದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

    ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ
    ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
    ಹುದ್ದೆಗಳ ಸಂಖ್ಯೆ: 25
    ಉದ್ಯೋಗ ಸ್ಥಳ: ಉಡುಪಿ
    ವೇತನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿಯ ನಿಯಮಗಳ ಪ್ರಕಾರ


















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಅಂಗನವಾಡಿ ಕಾರ್ಯಕರ್ತೆ3ಎಸ್​ಎಸ್​ಎಲ್​ಸಿ
    ಅಂಗನವಾಡಿ ಸಹಾಯಕಿ22ನಾಲ್ಕು 9ನೇ ತರಗತಿ ಉತ್ತೀರ್ಣ

    ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಅಂಗವಿಕಲ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷಗಳು

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಇದನ್ನು ಓದಿ: ಉತ್ತರ ಕನ್ನಡದ ಶಿರಸಿಯಲ್ಲಿದೆ ಉದ್ಯೋಗಾವಕಾಶ; ಬೇಗ ಅರ್ಜಿ ಸಲ್ಲಿಸಿ

    ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
    ಭರ್ತಿ ಮಾಡಿದ ಅರ್ಜಿ ನಮೂನೆ
    ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿ
    ವಾಸಸ್ಥಳದ ದೃಢೀಕರಣ
    ವಿದ್ಯಾರ್ಹತೆ ಪ್ರಮಾಣಪತ್ರ
    ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
    ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಆಗಸ್ಟ್ 2022

     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: anganwadirecruit.kar.nic.in

    ಇದನ್ನು ಓದಿ: ಬೆಂಗಳೂರಿನ ಸೆಂಟ್ರಲ್​ ಸಿಲ್ಕ್​ ಬೋರ್ಡ್​ನಲ್ಲಿದೆ ಉದ್ಯೋಗ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
    Published by:Seema R
    First published: