KIOCL Recruitment 2021: 8 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಾಸಾದವರಿಗೆ ಅವಕಾಶ

ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
    ಮಹಾಮಾರಿ ಕೊರೊನಾ ಅವಾಂತರ ಸಮಯದಲ್ಲಿ ಜನರು ಕೆಲಸಕ್ಕಾಗಿ ಹಾತೊರೆಯುತ್ತಿದ್ದಾರೆ. ದುಡಿದು ಜೀವಿಸಲು ಉದ್ಯೋಗ ಹುಡುಕುತ್ತಿದ್ದಾರೆ. ಹೀಗಿರುವಾಗ  ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) 8 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಜುಲೈ 25ರೊಳಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಪದವಿ, ಎಂಬಿಎ, ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಪಡೆದಿರುವ  ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ: ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ರಿಂದ 1,40,000ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಹೇಗೆ?: ನೇರ ಸಂದರ್ಶನ, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:  500ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.

    -ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ತೆರಳಿ ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. ಜುಲೈ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

    ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ನಕಲು ಪ್ರತಿ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 30,2021ರೊಳಗೆ ತಲುಪಿಸಬೇಕು

    ಕಚೇರಿ ವಿಳಾಸ:

    Joint General Manager (HR&A), HR Department, KIOCL Department, KIOCL limited, Koramangala 2nd Block, Sarjapura Road, Bengaluru-560034
    Published by:Harshith AS
    First published: