BMRCL Recruitment 2022: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (Bangalore Metro Rail Corporation Limited) ಅಧಿಕೃತ ಅಧಿಸೂಚನೆ ಮೂಲಕ ಫೈರ್ ಇನ್ಸ್ಪೆಕ್ಟರ್ (Fire Inspector) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03-06-2022 ರ ಮೊದಲು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು |
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) |
ಹುದ್ದೆಗಳ ಸಂಖ್ಯೆ |
6 |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಹುದ್ದೆಯ ಹೆಸರು |
ಫೈರ್ ಇನ್ಸ್ಪೆಕ್ಟರ್ |
ಸಂಬಳ |
ರೂ.40000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
B.Sc, B.E ಅಥವಾ B.Tech |
ಅರ್ಜಿ ಹಾಕುವ ಲಿಂಕ್ |
ಇಲ್ಲಿ ನೇರವಾಗಿ ಅರ್ಜಿ ಹಾಕಿ |
ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ |
03-06-2022 |
ಹಾರ್ಡ್ ಕಾಪಿ ಕಳುಹಿಸುವ ವಿಳಾಸ |
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು - 560027 |
ವೆಬ್ಸೈಟ್ |
ಹೆಚ್ಚಿನ ಮಾಹಿತಿಗೆ |
ಬೆಂಗಳೂರಿನಲ್ಲಿ ಖಾಲಿ ಇರುವ 6 ಫೈರ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅರ್ಜಿ ಆಹ್ವಾನಿಸಿದ್ದು, B.Sc, B.E ಅಥವಾ B.Tech ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಜೂನ್ 3 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40000/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಸಂಖ್ಯೆ: 6
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರು: ಫೈರ್ ಇನ್ಸ್ಪೆಕ್ಟರ್
ಸಂಬಳ: ರೂ.40000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು B.Sc, B.E ಅಥವಾ B.Tech ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ಅನುಭವದ ವಿವರಗಳು
ಅಭ್ಯರ್ಥಿಗಳು B.E ಅಥವಾ B.Tech ನೊಂದಿಗೆ ಕನಿಷ್ಠ 02 ವರ್ಷಗಳ ಅನುಭವ ಮತ್ತು B.Sc ಯೊಂದಿಗೆ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
ಹೆಚ್ಚುವರಿ ಅರ್ಹತೆ
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ 01 ವರ್ಷದ ಫೈರ್ ಸೇಫ್ಟಿ ಸರ್ಟಿಫಿಕೇಶನ್ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ವಯೋಮಿತಿ ಸಡಿಲಿಕೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಭರ್ತಿಗೆ ಆದೇಶ - ಮೇ 22 ಅಪ್ಲೈ ಮಾಡಲು ಕೊನೆಯ ದಿನ
ಆಯ್ಕೆ ಪ್ರಕ್ರಿಯೆ
ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು
english.bmrc.co.in ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ನಂತರ ಅವರು ಆನ್ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು - 560027 ಗೆ ಕಳುಹಿಸಬೇಕಾಗುತ್ತದೆ.
ವೆಬ್ಸೈಟ್: english.bmrc.co.in
ಅರ್ಜಿ ಹಾಕುವ ಲಿಂಕ್:
ಇಲ್ಲಿ ನೇರವಾಗಿ ಅರ್ಜಿ ಹಾಕಿ
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-05-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 03-06-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ