Central Coffee Research Institute Recruitment: ಸೆಂಟ್ರಲ್ ಕಾಫಿ ರಿಸರ್ಚ್ ಇನ್ಸ್ಟಿಟ್ಯೂಟ್ ( Central Coffee Research Institute) ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6 ರ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
ಸಂಸ್ಥೆಯ ಹೆಸರು |
ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ |
ಹುದ್ದೆಗಳ ಸಂಖ್ಯೆ |
01 |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಹುದ್ದೆಯ ಹೆಸರು |
ಕಾಫಿ ಲ್ಯಾಬೊರೇಟರಿ ತಂತ್ರಜ್ಞ |
ಸಂಬಳ |
ರೂ.250000-300000/- ವರ್ಷಕ್ಕೆ |
ಶೈಕ್ಷಣಿಕ ಅರ್ಹತೆ |
ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ |
ಅನುಭವ |
1 ವರ್ಷ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
06-04-2022 |
ಅರ್ಜಿ ಸಲ್ಲಿಸುವ ಲಿಂಕ್ |
ಇಲ್ಲಿ ಅರ್ಜಿ ಸಲ್ಲಿಸಿ |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಖಾಲಿ ಇರುವ 1 ಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಗೆ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಅಭ್ಯರ್ಥಿಗಳು ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಇನ್ನು ಏಪ್ರಿಲ್ 6ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ ರೂ.250000-300000/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರು: ಕಾಫಿ ಲ್ಯಾಬೊರೇಟರಿ ತಂತ್ರಜ್ಞ
ಸಂಬಳ: ರೂ.250000-300000/- ವರ್ಷಕ್ಕೆ
ಶೈಕ್ಷಣಿಕ ಅರ್ಹತೆ: ಸೆಂಟ್ರಲ್ ಕಾಫಿ ರಿಸರ್ಚ್ ಇನ್ಸ್ಟಿಟ್ಯೂಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು
ಅನುಭವದ ವಿವರಗಳು
ಅಭ್ಯರ್ಥಿಗಳು ಕಾಫಿ ಗುಣಮಟ್ಟದ ಮೌಲ್ಯಮಾಪನ ಹಾಗೂ ಉತ್ಪನ್ನ ಅಭಿವೃದ್ಧಿಯಲ್ಲಿ ಕಾಫಿ ಗುಣಮಟ್ಟ ಹಾಗೂ ಉತ್ಪನ್ನ ಅಭಿವೃದ್ಧಿ ಪ್ರಯೋಗಾಲಯದಲ್ಲಿ 01 ವರ್ಷದ ಅನುಭವವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕಾರಾವಧಿಯ ವಿವರಗಳು: 12 ತಿಂಗಳುಗಳು
ವಯಸ್ಸಿನ ಮಿತಿ: ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಇರಬೇಕು.
ವಯಸ್ಸಿನ ಸಡಿಲಿಕೆ: ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:ಎಲ್ಲಾ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-03-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2022
ವೆಬ್ಸೈಟ್: indiacoffee.org
ಅರ್ಜಿ ಸಲ್ಲಿಸುವ ಲಿಂಕ್ :
ಇಲ್ಲಿ ಕ್ಲಿಕ್ ಮಾಡಿ
ಯಾವುದೇ ಪ್ರಶ್ನೆಗಳಿಗೆ ಈ ಇಮೇಲ್ ಐಡಿಗೆ ಮೇಲ್ ಮಾಡಬಹುದು. :
atalincubationofccri@gmail.com . ಇದು ಅಭ್ಯರ್ಥಿಗಳು ಶ್ರೀ ಎಂ ಶ್ರೀನಿವಾಸ್ (CEO, AIC - CCRI - CED) ಅವರೊಂದಿಗೆ ನೇರ ಸಂಪರ್ಕ ನೀಡುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ