ಕಲ್ಯಾಣ ಕರ್ನಾಟಕದ ಪ್ರಮುಖ ಸಹಕಾರಿ ಸಂಸ್ಥೆಯಾದ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ(Sri Bhramaramba Pattina Souharda Sahakari Ni.)-ಮಸ್ಕಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಒಟ್ಟು 12 ಕಿರಿಯ ಸಹಾಯಕ (ಜೂನಿಯರ್ ಅಸಿಸ್ಟೆಂಟ್-Junior Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 21ರಂದು ಬೆಳಗ್ಗೆ 10.30 ಕ್ಕೆ ಆನ್ಲೈನ್ ಪರೀಕ್ಷೆ ನಡೆಯಲಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧಿಕೃತ ವೆಬ್ಸೈಟ್
www.sbscooperative.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ-ಮಸ್ಕಿ |
ಹುದ್ದೆಯ ಹೆಸರು |
ಕಿರಿಯ ಸಹಾಯಕ |
ಒಟ್ಟು ಹುದ್ದೆಗಳು |
12 |
ವಿದ್ಯಾರ್ಹತೆ |
ಯಾವುದೇ ಪದವಿ |
ಉದ್ಯೋಗದ ಸ್ಥಳ |
ಮಸ್ಕಿ(ರಾಯಚೂರು) |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
07/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
16/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/12/2021
ವಿದ್ಯಾರ್ಹತೆ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಯಾವುದೇ ವಿಷಯದಲ್ಲಿ ಕಡ್ಡಾಯವಾಗಿ ಪದವಿ ಪಡೆದಿರಬೇಕು.
ವಯೋಮಿತಿ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2021ಕ್ಕೆ 32 ವರ್ಷ ಮೀರಿರಬಾರದು.
ತಾಂತ್ರಿಕ ಅರ್ಹತೆ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕಂಪ್ಯೂಟರ್ ಬಳಕೆಯ ಜ್ಞಾನವಿರಬೇಕು.
ಅನುಭವ:
ಹಣಕಾಸು/ಸಹಕಾರ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಇರಬೇಕು. ಅನುಭವ ಇಲ್ಲದವರೂ ಕೂಡ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ಶುಲ್ಕ- 200 ರೂ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತದೆ.
ಆನ್ಲೈನ್ ಪರೀಕ್ಷೆಯು ಡಿಸೆಂಬರ್ 21ರ ಬೆಳಗ್ಗೆ 10.30ಕ್ಕೆ ನಡೆಯಲಿದೆ. 90 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. 90 ಬಹು ಆಯ್ಕೆ ಪ್ರಶ್ನೆಗಳನ್ನು ಕೊಡಲಾಗುತ್ತದೆ. ಆನ್ಲೈನ್ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ