AIFD Recruitment: ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ 54 ಸಾವಿರ ರೂ ವೇತನ

ಅರ್ಜಿಯನ್ನು ಅಭ್ಯರ್ಥಿಗಳು ಇಮೇಲ್ (E-mail)​ ಮೂಲಕ ಕಳುಹಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 18 ಆಗಿದೆ.

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಅಂಡ್ ಡಿಸೈನ್

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಅಂಡ್ ಡಿಸೈನ್

  • Share this:
    ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಮತ್ತು ಡಿಸೈನ್ (Army Institute of Fashion and Design) ನಲ್ಲಿ ಸಹಾಯಕ ಪ್ರಾಧ್ಯಾಪಕ (Assistant Professor) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಇಮೇಲ್ (E-mail)​ ಮೂಲಕ ಕಳುಹಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 18 ಆಗಿದೆ.

    ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ಹುದ್ದೆ ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತೆ ಇದೆ.

    ಸಂಸ್ಥೆಯ ಹೆಸರು: ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಅಂಡ್ ಡಿಸೈನ್ (AIFD)
    ಹುದ್ದೆಯ ಹೆಸರು: ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್
    ಹುದ್ದೆಗಳ ಸಂಖ್ಯೆ: 5
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ವೇತನ: 14000-54000ರೂ. ಪ್ರತಿ ತಿಂಗಳು

































    ಹುದ್ದಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಅಸೋಸಿಯೇಟ್ ಪ್ರೊಫೆಸರ್1 B .Arch, M.Arch, M.Sc, Ph.D54000 ರೂ ಮಾಸಿಕ
    ಸಹಾಯಕ ಪ್ರಾಧ್ಯಾಪಕ 22B.Arch, M.Arch, M.Sc36000 ರೂ ಮಾಸಿಕ
    ಲ್ಯಾಬ್ ಅಸಿಸ್ಟೆಂಟ್1ಡಿಪ್ಲೊಮಾ, ಪಿಯುಸಿ16000 ರೂ ಮಾಸಿಕ
    ಕ್ಲರ್ಕ್1ಪಿಯುಸಿ14000 ರೂ ಮಾಸಿಕ

    ವಯಸ್ಸಿನ ಮಿತಿ: ಆರ್ಮಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ಡಿಸೈನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು  ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

    ವಯೋಮಿತಿ ಸಡಿಲಿಕೆ:
    ಆರ್ಮಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಅಂಡ್ ಡಿಸೈನ್ ನಿಯಮಗಳ ಪ್ರಕಾರ

    ಇದನ್ನು ಓದಿ: ನವೋದಯ ವಿದ್ಯಾಲಯ ಸಮಿತಿಯಲ್ಲಿ 1616 ಹುದ್ದೆಗಳ ನೇಮಕಾತಿ; ಬಿಎಡ್​ ಆದವರಿಗೆ ಅವಕಾಶ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ
    ಇಮೇಲ್​ ಮುಖಾಂತರ

    ಇಮೇಲ್​ ವಿಳಾಸ : aifd@awesindia.edu.in

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 03 ಜುಲೈ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 18 ಜುಲೈ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: aifdonline.in

    ಇದನ್ನು ಓದಿ: ಅರೆಕಾಲಿಕ ಕನ್ನಡ ಶಿಕ್ಷಕರ ಹುದ್ದೆಗೆ ವಾಕ್​-ಇನ್​ ಇಂಟರ್​ವ್ಯೂ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: