Jobs In Dharwad: ಧಾರವಾಡದಲ್ಲಿದೆ ಸಹಾಯಕ ಪ್ರಾಧ್ಯಾಪಕರ ಹುದ್ದೆ; ಮಾಸಿಕ 45000 ರೂ ವೇತನ

ಧಾರವಾಡದಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಈ ಹುದ್ದೆಗೆ ಸೆಪ್ಟೆಂಬರ್​ 5ರಂದು ವಾಕ್​ ಇನ್​ ಇಂಟರ್​ವ್ಯೂ ನಡೆಯಲಿದೆ.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

 • Share this:
  ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ ( University of Agricultural Sciences Dharwad) ಸಹಾಯಕ ಪ್ರಾಧ್ಯಾಪಕರ (Assistant Professor) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆಲ ವಸ್ತ್ರ ಮತ್ತು ಉಡುಪು ವಿನ್ಯಾಸ ವಿಭಾಗದಲ್ಲಿ ಈ ನೇಮಕಾತಿ ನಡೆಯಲಿದೆ. ಧಾರವಾಡದಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಈ ಹುದ್ದೆಗೆ ಸೆಪ್ಟೆಂಬರ್​ 5ರಂದು ವಾಕ್​ ಇನ್​ ಇಂಟರ್​ವ್ಯೂ ನಡೆಯಲಿದೆ.

  ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದೆ. 179 ದಿನಗಳ ಅವಧಿಗೆ ಮೀರದಂತೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.  ಹುದ್ದೆ ಮಾಹಿತಿಹುದ್ದೆ ವಿವರ
  ವಿಶ್ವವಿದ್ಯಾಲಯದ ಹೆಸರುಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
  ಹುದ್ದೆಯ ಹೆಸರುಸಹಾಯಕ ಪ್ರಾಧ್ಯಾಪಕರು
  ಹುದ್ದೆಗಳ ಸಂಖ್ಯೆ1
  ಕಾರ್ಯ ನಿರ್ವಹಣೆ ಸ್ಥಳಧಾರವಾಡ
  ವೇತನ40000-45000 ರೂ ಪ್ರತಿ ತಿಂಗಳು

  ಶೈಕ್ಷಣಿಕ ಅರ್ಹತೆ: ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಜವಳಿ ಮತ್ತು ಉಡುಪು ವಿನ್ಯಾಸದಲ್ಲಿ ಎಂಎಚ್.ಎಂಸ್ಸಿ, ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರಬೇಕು.

  ಇದನ್ನು ಓದಿ: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇರ ಸಂದರ್ಶನ​; ಬಿಇ, ಡಿಪ್ಲೊಮಾ ಆದವರಿಗಿದೆ ಕೆಲಸದ ಅವಕಾಶ

  ವಯೋಮಿತಿ: ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

  ವಯೋಮಿತಿ ಸಡಿಲಿಕೆ:
  ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನಿಯಮಾವಳಿ ಪ್ರಕಾರ

  ಆಯ್ಕೆ ಪ್ರಕ್ರಿಯೆ
  ಲಿಖಿತ ಪರೀಕ್ಷೆ ಮತ್ತು ಸಂದರ್ಶನ

  ಪ್ರಮುಖ ದಿನಾಂಕಗಳು:
  ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 18 ಆಗಸ್ಟ್​ 2022
  ವಾಕ್-ಇನ್ ದಿನಾಂಕ: ಸೆಪ್ಟೆಂಬರ್ 5ರಂದು ಬೆಳಗ್ಗೆ 10:30ಕ್ಕೆ

  ಇದನ್ನು ಓದಿ: ಕೇಂದ್ರೀಯ ವಿವಿಯಲ್ಲಿದೆ ಲೈಬ್ರರಿ ಟ್ರೈನಿ ಹುದ್ದೆಗಳು; ವಾಕ್​-ಇನ್​-ಇಂಟರ್​ವ್ಯೂನಲ್ಲಿ ಭಾಗಿಯಾಗಿ

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: uasd.edu

  ನೇರ ಸಂದರ್ಶನದಲ್ಲಿ ಅಗತ್ಯವಾಗಿ ಕೊಂಡೊಯ್ಯಬೇಕಾದ ದಾಖಲೆ

  ಆಸಕ್ತ ಅಭ್ಯರ್ಥಿಗಳು ಭರ್ತಿಯಾದ ಅರ್ಜಿಯನ್ನು ನೇರ ಸಂದರ್ಶನಕ್ಕೆ ಕೊಂಡೊಯ್ಯವುದು ಅವಶ್ಯ.
  ಪದವಿ ಮತ್ತು 10ನೇ ತರಗತಿ ಮಾರ್ಕ್ಸ್​ ಕಾರ್ಡ್​​
  ಸಕ್ಷಮ ಅಧಿಕಾರಿಗಳು ನೀಡಿದ ಅನುಭವ ಪ್ರಮಾಣಪತ್ರಗಳು/ಯಾವುದೇ ಸಂಬಂಧಿತ ಪ್ರಮಾಣಪತ್ರಗಳು/ ಪ್ರಶಂಸಾಪತ್ರಗಳು.
  ಜಾತಿ ಪ್ರಮಾಣ ಪತ್ರ
  ನಾನ್-ಕ್ರೀಮಿ ಲೇಯರ್ ಪ್ರಮಾಣಪತ್ರ ಅತ್ಯಗತ್ಯ
  ಶೈಕ್ಷಣಿಕ ಅರ್ಹತೆ ಸಂಬಂಧಿಸಿದ ಯಾವುದೇ ಇತರ ಸಂಬಂಧಿತ ಮಾಹಿತಿ.
  Published by:Seema R
  First published: