• Home
  • »
  • News
  • »
  • jobs
  • »
  • Government Job: SSLC, ಪಿಯುಸಿ ಪಾಸಾದವರಿಗೆ ಸರ್ಕಾರಿ ನೌಕರಿ, ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

Government Job: SSLC, ಪಿಯುಸಿ ಪಾಸಾದವರಿಗೆ ಸರ್ಕಾರಿ ನೌಕರಿ, ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 23, 2022ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

  • News18 Kannada
  • Last Updated :
  • Bagalkot, India
  • Share this:

    Bagalkot Zilla Panchayat Recruitment 2022: ಬಾಗಲಕೋಟೆ ಜಿಲ್ಲಾ ಪಂಚಾಯತ್​(Bagalkot Zilla Panchayat )ನಲ್ಲಿ ಒಟ್ಟು 54 ಬಿಲ್ ಕಲೆಕ್ಟರ್(Bill Collector), ಕ್ಲರ್ಕ್(Clerk)​, ಅಟೆಂಡರ್(Attender) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಡಿಸೆಂಬರ್ 23, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಬಾಗಲಕೋಟೆ ಜಿಲ್ಲಾ ಪಂಚಾಯತ್
    ಹುದ್ದೆಯ ಹೆಸರುಬಿಲ್ ಕಲೆಕ್ಟರ್, ಕ್ಲರ್ಕ್​, ಅಟೆಂಡರ್
    ಒಟ್ಟು ಹುದ್ದೆ54
    ವಿದ್ಯಾರ್ಹತೆ10ನೇ ತರಗತಿ, ಪಿಯುಸಿ
    ವೇತನನಿಯಮಾನುಸಾರ
    ಸ್ಥಳಬಾಗಲಕೋಟೆ
    ಅರ್ಜಿ ಸಲ್ಲಿಕೆ ಬಗೆಆನ್​​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ17/11/2022
    ಅರ್ಜಿ ಸಲ್ಲಿಸಲು ಕೊನೆ ದಿನ23/12/2022


    ಹುದ್ದೆಯ ಮಾಹಿತಿ:
    ಬಿಲ್​ ಕಲೆಕ್ಟರ್- 10 ಹುದ್ದೆ
    ಕ್ಲರ್ಕ್​ & ಡೇಟಾ ಎಂಟ್ರಿ ಆಪರೇಟರ್(DEO)- 12 ಹುದ್ದೆ
    ಅಟೆಂಡರ್ (ಪ್ಯೂನ್)- 32 ಹುದ್ದೆ


    ಇದನ್ನೂ ಓದಿ: Jobs in Bengaluru: ಬೆಂಗಳೂರು ಯೂನಿವರ್ಸಿಟಿಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಬಿಲ್​ ಕಲೆಕ್ಟರ್- ಪಿಯುಸಿ
    ಕ್ಲರ್ಕ್​ & ಡೇಟಾ ಎಂಟ್ರಿ ಆಪರೇಟರ್(DEO)- ಪಿಯುಸಿ
    ಅಟೆಂಡರ್ (ಪ್ಯೂನ್)- 10ನೇ ತರಗತಿ


    ವಯೋಮಿತಿ:
    ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 23, 2022ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಎಸ್​ಸಿ/ಎಸ್​ಟಿ/ ಪ್ರವರ್ಗ-1 ಅಭ್ಯರ್ಥಿಗಳು-5 ವರ್ಷ
    ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
    PWD/ ವಿಧವಾ ಅಭ್ಯರ್ಥಿಗಳು- 10 ವರ್ಷ


    ಹುದ್ದೆಯ ಕುರಿತಾದ ನೋಟಿಫಿಕೇಶನ್ PDF ಇಲ್ಲಿದೆ.


    Bagalkot-Zilla-Panchayat notification


    ಅರ್ಜಿ ಶುಲ್ಕ:
    PWD ಅಭ್ಯರ್ಥಿಗಳು-100 ರೂ.
    ಎಸ್​ಸಿ/ಎಸ್​ಟಿ/ ಪ್ರವರ್ಗ-1/ ಮಾಜಿ ಸೈನಿಕ ಅಭ್ಯರ್ಥಿಗಳು- 200 ರೂ.
    ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
    ಸಾಮಾನ್ಯ ಅಭ್ಯರ್ಥಿಗಳು-500 ರೂ.
    ಅರ್ಜಿ ಶುಲ್ಕ ಪಾವತಿಸುವ ಬಗೆ-ಆನ್​ಲೈನ್​ (ಬಾಗಲಕೋಟೆ ಜಿಲ್ಲಾ ಪಂಚಾಯತ್​​ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಸ್ಟೇಟ್ ಬ್ಯಾಂಕ್​ ಆಫ್ ಇಂಡಿಯಾ ಬಾಗಲಕೋಟೆ)


    ಇದನ್ನೂ ಓದಿ: KHPT Recruitment 2022: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ ಕೆಲಸ ಖಾಲಿ ಇದೆ, ಈಗಲೇ ಅರ್ಜಿ ಹಾಕಿ


    ಆಯ್ಕೆ ಪ್ರಕ್ರಿಯೆ:
    ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 23/12/2022


    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 08354-235576 ಗೆ ಕರೆ ಮಾಡಬಹುದು.

    Published by:Latha CG
    First published: