HOME » NEWS » Jobs » BALLARI ZILLA PANCHAYAT RECRUITMENT 2021 NOTIFICATION 16 SPECIALIST AND PROFESSIONAL POSTS HG

Zilla Panchayat Recruitment 2021: 16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೂ ಅವಕಾಶ!

ಪೋಸ್ಟ್ ಗ್ರಾಜುಯೇಟ್, ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನುಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

news18-kannada
Updated:June 2, 2021, 5:49 PM IST
Zilla Panchayat Recruitment 2021: 16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೂ ಅವಕಾಶ!
jobs
  • Share this:
ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ  16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅವಕಾಶ ನೀಡಿದ್ದು ಜೂನ್ 14ರೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್, ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನುಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ:

ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ.ನಿಂದ  30,000 ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 14,2021ರ ಮಧ್ಯಾಹ್ನ 1:30ರೊಳಗೆ ಅರ್ಜಿಯನ್ನು ತಲುಪಿಸಬೇಕು



ಕಚೇರಿ ವಿಳಾಸ:

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಜಿಲ್ಲಾ ಪಂಚಾಯತ್, ಬಳ್ಳಾರಿ -583102.
First published: June 2, 2021, 5:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories