CSB Recruitment: ಬೆಂಗಳೂರಿನ ಸೆಂಟ್ರಲ್​ ಸಿಲ್ಕ್​ ಬೋರ್ಡ್​ನಲ್ಲಿದೆ ಉದ್ಯೋಗ

ಅಭ್ಯರ್ಥಿಗಳು ಆಫ್​​ಲೈನ್​ ಮೂಲಕ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಆಗಸ್ಟ್​ 9ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರು ಸಿಲ್ಕ್​  ಬೋರ್ಡ್

ಬೆಂಗಳೂರು ಸಿಲ್ಕ್​ ಬೋರ್ಡ್

  • Share this:
    ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ (Central Silk Board) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಸಮಾಲೋಚಕರ (Consultant) ಹುದ್ದೆ ಭರ್ತಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಆಫ್​​ಲೈನ್​ ಮೂಲಕ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಆಗಸ್ಟ್​ 9ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಈ ಹುದ್ದೆಗಳನ್ನು ಕೇಂದ್ರ ಜವಳಿ ಸಚಿವಾಲಯ ಆರು ತಿಂಗಳ ಕಾಲ ಒಪ್ಪಂದದ ಆಧಾರದ ಮೇಲೆ ನೇಮಕ ನಡೆಸಲಾಗುತ್ತಿದೆ. ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ಮಾಡಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಸೆಂಟ್ರಲ್ ಸಿಲ್ಕ್ ಬೋರ್ಡ್ (CSB)
    ಹುದ್ದೆಗಳ ಸಂಖ್ಯೆ: 3
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ಹುದ್ದೆಯ ಹೆಸರು: ಸಲಹೆಗಾರ
    ಸಂಬಳ:  ನಿಯಮಗಳ ಪ್ರಕಾರ























    ಹುದ್ದೆಹುದ್ದೆ ಸಂಖ್ಯೆವಯೋಮಿತಿ
    ಸಲಹೆಗಾರ (ಕಾನೂನು ಮತ್ತು ಕಾರ್ಮಿಕ)164 ವರ್ಷ
    ಸಲಹೆಗಾರ (ತಾಂತ್ರಿಕ ವಿಭಾಗ)164 ವರ್ಷ
    ಸಲಹೆಗಾರ (ಸ್ಥಾಪನೆ)1ಮಂಡಳಿಯ ನಿಯಮ ಅನುಸಾರ

    ವಿದ್ಯಾರ್ಹತೆ: ಮಂಡಳಿಯ ನೇಮಕಾತಿ ನಿಯಮಗಳ ಪ್ರಕಾರ

    ವಯೋಮಿತಿ ಸಡಿಲಿಕೆ:
    ಕೇಂದ್ರ ರೇಷ್ಮೆ ಮಂಡಳಿಯ ನಿಯಮಗಳ ಪ್ರಕಾರ

    ಇದನ್ನು ಓದಿ: ಉತ್ತರ ಕನ್ನಡದ ಶಿರಸಿಯಲ್ಲಿದೆ ಉದ್ಯೋಗಾವಕಾಶ; ಬೇಗ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಜುಲೈ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: csb.gov.in

    ಇದನ್ನು ಓದಿ: ಶಿವಮೊಗ್ಗದ ಸಹಕಾರ ಸಂಘದಲ್ಲಿದೆ ಕ್ಲರ್ಕ್​ ಹುದ್ದೆ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಇಲ್ಲ ಮೇಲ್ಕಂಡ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮಾಡಬಹುದಾಗಿದೆ.

    ಸದಸ್ಯ – ಕಾರ್ಯದರ್ಶಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಮಡಿವಾಳ, ಹೊಸೂರು ರಸ್ತೆ, ಬೆಂಗಳೂರು – 560068, ಕರ್ನಾಟಕ
    Published by:Seema R
    First published: