BESCOM Recruitment 2021: ಪದವಿ ಆಗಿದೆಯಾ? ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ!

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

JOB

JOB

  • Share this:
    ಕೊರೊನಾ ಸಮಯದಲ್ಲಿ ಕೆಲಸವಿಲ್ಲದೆ ಕೈಕಟ್ಟಿ ಕುಳಿತ ಅನೇಕ ಮಂದಿಯಿದ್ದಾರೆ. ಅವರಿಗಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಕಂಪೆನಿ ಸೆಕ್ರೆಟರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 5ರೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

    ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವಯೋಮಿತಿ: ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ: ಕಂಪೆನಿ ಸೆಕ್ರೆಟರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 61,420 ರಿಂದ 1,03,290ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?

    ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ತಲುಪಿಸಬೇಕು. ಜುಲೈ 5,2021ರೊಳಗೆ ಅರ್ಜಿಯನ್ನು ತಲುಪಬೇಕು.

    ಕಚೇರಿ ವಿಳಾಸ:

    ಜನರಲ್ ಮ್ಯಾನೇಜರ್, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕೆಆರ್ ಸರ್ಕಲ್ ಕಚೇರಿ, ಬೆಂಗಳೂರು-560 001.
    Published by:Harshith AS
    First published: