ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ (Bangalore Rural Zilla Panchayat) 50 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಮಾಂತರ ವ್ಯಾಪ್ತಿಯ ನಾಲ್ಕು ತಾಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲದಲ್ಲಿ ಈ ಹುದ್ದೆಗಳು ಖಾಲಿ ಇದೆ. ಬಿಲ್ ಕಲೆಕ್ಟರ್, ಡಿಇಒ, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ ಆಗಿ ಕೆಲಸ ಹುಡುಕುತ್ತಿರುವವರಿಗೆ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ (Online) ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 6, 2022 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಹುದ್ದೆಗಳ ಸಂಖ್ಯೆ: 50
ಉದ್ಯೋಗ ಸ್ಥಳ: ಬೆಂಗಳೂರು ಗ್ರಾಮಾಂತರ, ಕರ್ನಾಟಕ
ಹುದ್ದೆಯ ಹೆಸರು: ಬಿಲ್ ಕಲೆಕ್ಟರ್, ಡಿಇಒ, ಅಟೆಂಡೆಂಟ್, ಕ್ಲೀನರ್
ಹುದ್ದೆಗಳು |
ಹುದ್ದೆ ಸಂಖ್ಯೆ |
ವಿದ್ಯಾರ್ಹತೆ |
ಕರ ವಸೂಲಿಗಾರ |
4 |
ಪಿಯುಸಿ, ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ನ ಆರು ತಿಂಗಳ ಪ್ರಮಾಣ ಪತ್ರ |
ಡೇಟಾ ಎಂಟ್ರಿ ಆಪರೇಟರ್ |
4 |
ಎಸ್ಎಸ್ಎಲ್ಸಿ. ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ನ ಆರು ತಿಂಗಳ ಪ್ರಮಾಣ ಪತ್ರ |
ಅಟೆಂಡೆಂಟ್ |
8 |
ಎಸ್ಎಸ್ಎಲ್ಸಿ ಉತ್ತೀರ್ಣ |
ಕ್ಲೀನರ್ |
34 |
ಎಸ್ಎಸ್ಎಲ್ಸಿ ಉತ್ತೀರ್ಣ |
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯಲ್ಲಿ ಉತ್ತೀರ್ಣ/ ಪಿಯುಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ
ಪ. ಜಾತಿ/ ಪ. ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ
ವೇತನ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಿಯಮಾವಳಿಯಂತೆ
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 200 ರೂ.
ಪ. ಜಾತಿ/ ಪ. ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 100 ರೂ.
ಇದನ್ನು ಓದಿ: ಎಸ್ಎಸ್ಎಲ್ಸಿ, ಪಿಯುಸಿ ಆದವರಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ ಅವಕಾಶ
ಆಯ್ಕೆ ವಿಧಾನ
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಹಾಗೂ ಮೀಸಲಾತಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಮೇ 21, 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 6, 2022
ಅರ್ಜಿ ಶುಲ್ಕ ಕಟ್ಟಲು ಕಡೆಯ ದಿನಾಂಕ ಜೂನ್ 6, 2022
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆಗೆ
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್
bangalorerural.nic.in
ಇದನ್ನು ಓದಿ: ಮೆಸ್ಕಾಂನಲ್ಲಿ 183 ಹುದ್ದೆಗಳು ಖಾಲಿ, ಪದವಿ, ಡಿಪ್ಲೋಮಾದವರಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ
- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ಬಳಿಕ ಮೇಲ್ಕಂಡ ಲಿಂಕ್ಗೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ವೇಳೆ ಕೆಳಕಂಡ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯವಾಗಿದೆ
- ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮ ಪಂಚಾಯತ್ ನಿವಾಸಿಯಾಗಿರಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ಪ್ರಮಾಣ ಪತ್ರ (ಆಧಾರ್ ಕಾರ್ಡ್ / ವೋಟರ್ ಐಡಿ ಮತ್ತು ವಾಸದೃಢೀಕರಣ ಪತ್ರ) (In PDF)
- ಖಾಲಿ ಹುದ್ದೆ ಮತ್ತು ಇತರ ವಿವರಗಳಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಬೇಕು.
- ಸೆಲ್ಪ್ ಅಟೆಸ್ಟೆಡ್ ಪಾಸ್ ಪೋರ್ಟ್ ಸೈಜ್ ಫೋಟೋ (In JPEG)
- ಎಸ್. ಎಸ್. ಎಲ್. ಸಿ ಅಥವಾ ಪಿ.ಯು.ಸಿ ಸರ್ಟಿಪಿಕೇಟ್ (In PDF)
- ಗಣಕಯಂತ್ರ ಜ್ಞಾನ ಪ್ರಮಾಣ ಪತ್ರ (ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ 6 ತಿಂಗಳ ತರಬೇತಿ ಪಡೆದ ಪ್ರಮಾಣ ಪತ್ರ)(PDF)
- ಕೆಲಸದ ಅನುಭವ ದೃಢೀಕರಣ ಪತ್ರ (In PDF)
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅರ್ಜಿ ಸಲ್ಲಿಸಿದ ದಿನಾಂಕದೊಳಗೆ ಪ್ರಮಾಣ ಪತ್ರವು ಮಾನ್ಯತೆ ಹೊಂದಿರಬೇಕು) (In PDF)
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಶುಲ್ಕ ಪಾವತಿಸಿದ ನಂತರ ರಶೀದಿಯನ್ನು ಅಪ್ ಲೋಡ್ ಮಾಡುವುದು(PDF)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ