Job Alert: ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ; ವೈದ್ಯಕೀಯ ಪದವೀಧರರಿಗೆ ಅವಕಾಶ

ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ತಿಂಗಳು ಹೊರಡಿಸಲಾದ ಅಧಿಸೂಚನೆ ರದ್ದುಗೊಳಿಸಲಾಗಿದೆ. ಮತ್ತೊಮ್ಮೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಬೆಂಗಳೂರಿನ ಶ್ರೀ ಅಟಲ್​ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (Shri Atal Bihari Vajapayee Medical College and Research Institute) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಫೆಸರ್​, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 61 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮತ್ತು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ತಿಂಗಳು ಹೊರಡಿಸಲಾದ ಅಧಿಸೂಚನೆ ರದ್ದುಗೊಳಿಸಲಾಗಿದೆ. ಮತ್ತೊಮ್ಮೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಈ ಬಾರಿ ಹೈದ್ರಬಾದ್​ ಕರ್ನಾಟಕ ಮತ್ತು ನಾನ್​​ ಹೈದ್ರಾಬಾದ್​ ಕರ್ನಾಟಕದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (SABVMCRI)
    ಹುದ್ದೆಯ ಹೆಸರು: ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್
    ಹುದ್ದೆಗಳ ಸಂಖ್ಯೆ: 61
    ಉದ್ಯೋಗ ಸ್ಥಳ: ಬೆಂಗಳೂರು
    ವೇತನ: 79800-218200 ರೂ ಪ್ರತಿ ತಿಂಗಳು
































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಪ್ರಾಧ್ಯಾಪಕ6ಎಂಬಿಬಿಎಸ್​​,ಎಂಡಿ, ಎಂಎಸ್​, ಡಿಎನ್​ಬಿಗರಿಷ್ಠ 50 ವರ್ಷ144200-218200 ರೂ ಮಾಸಿಕ
    ಅಸೋಸಿಯೇಟ್ ಪ್ರೊಫೆಸರ್22ಎಂಬಿಬಿಎಸ್​​,ಎಂಡಿ, ಎಂಎಸ್​, ಡಿಎನ್​ಬಿಗರಿಷ್ಠ 45 ವರ್ಷ45 131400-217100 ರೂ ಮಾಸಿಕ
    ಸಹಾಯಕ ಪ್ರಾಧ್ಯಾಪಕರು33ಎಂಬಿಬಿಎಸ್​​, ಎಂಡಿ, ಎಂಎಸ್​ಗರಿಷ್ಠ 45 ವರ್ಷ79800-211500 ರೂ ಮಾಸಿಕ


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

    ಇದನ್ನು ಓದಿ: ದೂರಸಂಪರ್ಕ ಇಲಾಖೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗಾವಕಾಶ; ತಿಂಗಳಿಗೆ 75 ಸಾವಿರ ರೂ ವೇತನ

    ಅರ್ಜಿ ಶುಲ್ಕ
    ಎಲ್ಲಾ ಅಭ್ಯರ್ಥಿಗಳು: 2000 ರೂ.

    ಅರ್ಜಿ ಶುಲ್ಕ ಪಾವತಿ ವಿಧಾನ: ಆನ್‌ಲೈನ್

    ಅರ್ಜಿ ಸಲ್ಲಿಕೆ: ಆನ್​ಲೈನ್​ ಮತ್ತು ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಅನುಭವ, ವ್ಯಕ್ತಿತ್ವ, ಪ್ರಸ್ತುತಿ, ಕನ್ನಡ ಭಾಷಾ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ ವಿಳಾಸ
    ನಿರ್ದೇಶಕರು ಮತ್ತು ಡೀನ್ ಕಛೇರಿ, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಶಿವಾಜಿನಗರ, ಬೆಂಗಳೂರು - 560001

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 17 ಸೆಪ್ಟೆಂಬರ್​ 2022

    ಇದನ್ನು ಓದಿ: ಸ್ಟೀಲ್​ ಅಥಾರಿಟಿ ಆಫ್​ ಇಂಡಿಯಾದಲ್ಲಿದೆ ಕೆಲಸ; ತಿಂಗಳಿಗೆ 50000 ರೂ ವೇತನ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು

    ಅಧಿಕೃತ ಅಧಿಸೂಚನೆ - ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: sabvmcri.karnataka.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: