Guest Faculties Job: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳು ಇವಾಗಿವೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಇಲ್ಲಿದೆ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಬೆಂಗಳೂರು ವಿಶ್ವವಿದ್ಯಾಲಯದ (Bangalore University) ಕಾನೂನು ಕಾಲೇಜಿನಲ್ಲಿ ವಿವಿಧ ವಿಷಯಗಳ ಬೋಧನೆಗೆ ಅತಿಥಿ ಉಪನ್ಯಾಸಕರ (Guest Faculties) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು, ಕನ್ನಡ, ಇಂಗ್ಲಿಷ್​, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ ಮತ್ತು ಅರ್ಥಶಾಸ್ತ್ರ ಬೋಧನೆಗ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 29 ಆಗಸ್ಟ್​ ಆಗಿದೆ.

    ಈ ಹುದ್ದೆಗಳನ್ನು ಸಂಪೂರ್ಣವಾಗಿ ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳು ಇವಾಗಿವೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ವಿಶ್ವವಿದ್ಯಾಲಯದ ಹೆಸರುಬೆಂಗಳೂರು ವಿಶ್ವವಿದ್ಯಾಲಯ
    ಹುದ್ದೆಅತಿಥಿ ಉಪನ್ಯಾಸಕರು
    ಹುದ್ದೆಗಳ ಸಂಖ್ಯೆನಿರ್ದಿಷ್ಟ ಪಡಿಸಿಲ್ಲ
    ಉದ್ಯೋಗ ಸ್ಥಳಬೆಂಗಳೂರು
    ವೇತನಬೆಂಗಳೂರು ವಿಶ್ವವಿದ್ಯಾಲಯದ ನಿಯಮ ಅನುಸಾರ

    ಶೈಕ್ಷಣಿಕ ಅರ್ಹತೆ: ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಗಳ ಪ್ರಕಾರ

    ಇದನ್ನು ಓದಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ; 320 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ : ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್​​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bangaloreuniversity.ac.in

    ಅರ್ಜಿ ಸಲ್ಲಿಕೆ ವಿಳಾಸ
    ಪ್ರಾಂಶುಪಾಲರು, ವಿಶ್ವವಿದ್ಯಾಲಯ ಕಾನೂನು ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಕ್ಯಾಂಪಸ್, ಬೆಂಗಳೂರು – 560056.

    ಇದನ್ನು ಓದಿ: ಅಗ್ನಿ ಸ್ಟೀಲ್ಸ್​ ಕಂಪನಿಯಲ್ಲಿದೆ ಡಿಗ್ರಿ ಓದಿದವರಿಗೆ ಉದ್ಯೋಗ; ಮೈಸೂರಿನಲ್ಲಿ ವಾಕ್​ ಇನ್​ ಇಂಟರ್​ವ್ಯೂ

    ಅರ್ಜಿ ಪ್ರತಿ ಪಡೆಯ ಲಿಂಕ್​

    www.bangaloreuniversity.ac.in ಅಥವಾ  ulcbangalore.com

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಅರ್ಜಿ ಸಲ್ಲುಸಿ
    Published by:Seema R
    First published: