Basava Bank Recruitment 2023: ಬಾಗಲಕೋಟೆಯ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್(Shri Basaveshwara Sahakari Bank Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 35 ಜೂನಿಯರ್ ಅಸಿಸ್ಟೆಂಟ್(Junior Assistant), ಸೆಪಾಯ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಇದೇ ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ(Bagalkot) ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ತಡಮಾಡದೇ ಈಗಲೇ ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬಾಗಲಕೋಟೆಯ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ |
ಹುದ್ದೆ | ಜೂನಿಯರ್ ಅಸಿಸ್ಟೆಂಟ್, ಸೆಪಾಯ್ |
ಒಟ್ಟು ಹುದ್ದೆ | 35 |
ವಿದ್ಯಾರ್ಹತೆ | ಪದವಿ, 10ನೇ ತರಗತಿ |
ವೇತನ | ಮಾಸಿಕ ₹ 27,650- 62,600 |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 31, 2023 |
ವಿದ್ಯಾರ್ಹತೆ:
ಜೂನಿಯರ್ ಅಸಿಸ್ಟೆಂಟ್- ಪದವಿ
ಸೆಪಾಯ್- 10ನೇ ತರಗತಿ
ಇದನ್ನೂ ಓದಿ: LIC ನೇಮಕಾತಿ- 300 ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಪಾಸಾದವರು Apply ಮಾಡಿ
ವಯೋಮಿತಿ:
ಬಾಗಲಕೋಟೆಯ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 31, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ
SC/ST/ ಪ್ರವರ್ಗ -1 ಅಭ್ಯರ್ಥಿಗಳಿಗೆ- 500 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ-1000 ರೂ,
ಸೆಪಾಯ್ ಹುದ್ದೆಗೆ
SC/ST/ ಪ್ರವರ್ಗ -1 ಅಭ್ಯರ್ಥಿಗಳಿಗೆ- 250 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 500 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ವೇತನ:
ಜೂನಿಯರ್ ಅಸಿಸ್ಟೆಂಟ್- ಮಾಸಿಕ ₹ 33,450-62,600
ಸೆಪಾಯ್- ಮಾಸಿಕ ₹ 27,650- 52,650
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 31 ರೊಳಗೆ ಕಳುಹಿಸಬೇಕು.
ಸದಸ್ಯ ಕಾರ್ಯದರ್ಶಿ
ಸಿಬ್ಬಂದಿ ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಬಾಗಲಕೋಟೆ
ಬಸವೇಶ್ವರ ಬ್ಯಾಂಕ್ ವೃತ್ತ
ಸೆಕ್ಟರ್ ನಂ-25
ನವನಗರ
ಬಾಗಲಕೋಟೆ-587103
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 31, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ