BOI Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಬ್ಯಾಂಕ್ ಆಫ್ ಇಂಡಿಯಾ(Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಪ್ರೊಬೆಷನರಿ ಆಫೀಸರ್ (Probationary Officer- PO) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಕೆಲಸ ಹುಡುಕುತ್ತಿದ್ದರೆ ಈಗಲೇ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆ | ಪ್ರೊಬೆಷನರಿ ಆಫೀಸರ್ |
ಒಟ್ಟು ಹುದ್ದೆ | 500 |
ವಿದ್ಯಾರ್ಹತೆ | ಪದವಿ, ಎಂಜಿನಿಯರಿಂಗ್ |
ವೇತನ | ಮಾಸಿಕ ₹ 36,000-63,840 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 25, 2023 |
ಇದನ್ನೂ ಓದಿ: Banking Jobs: ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ ಏನಿರಬೇಕು?
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಕ್ರೆಡಿಟ್ ಆಫೀಸರ್ ಇನ್ ಜನರಲ್ ಬ್ಯಾಂಕಿಂಗ್ ಸ್ಟ್ರೀಮ್- ಪದವಿ (ಡಿಗ್ರಿ)
ಐಟಿ ಆಫೀಸರ್ ಇನ್ ಸ್ಪೆಷಲಿಸ್ಟ್ ಸ್ಟ್ರೀಮ್- ಬಿಇ/ ಬಿ.ಟೆಕ್ (ಎಂಜಿನಿಯರಿಂಗ್)
ವಯೋಮಿತಿ:
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 29 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST/ ಮಾಜಿ ಸೈನಿಕ ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಇದನ್ನೂ ಓದಿ: Big Bazaar Jobs: ಬಿಗ್ ಬಜಾರ್ನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 48,000 ಸಂಬಳ
ಅರ್ಜಿ ಶುಲ್ಕ:
ಜನರಲ್/ EWS/ OBC ಅಭ್ಯರ್ಥಿಗಳು- 850 ರೂ.
SC/ST ಅಭ್ಯರ್ಥಿಗಳು- 175 ರೂ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕದರೂ
ವೇತನ:
ಮಾಸಿಕ ₹ 36,000-63,840
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ಗ್ರೂಪ್ ಡಿಸ್ಕಶನ್ (GD)
ವೈಯಕ್ತಿಕ ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 25, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಫೆಬ್ರವರಿ 25, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ