BOB Recruitment 2022: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಬಂಪರ್ ಅವಕಾಶವಿದೆ. ಬ್ಯಾಂಕ್ ಆಫ್ ಬರೋಡಾ(Bank of Baroda)ದಲ್ಲಿ 3 ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್(Business Correspondent Supervisor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಿ. ಡಿಸೆಂಬರ್ 20, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರ, ಬಾಗಲಕೋಟೆ, ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬ್ಯಾಂಕ್ ಆಫ್ ಬರೋಡಾ |
ಹುದ್ದೆ | ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್ |
ಒಟ್ಟು ಹುದ್ದೆ | 3 |
ವೇತನ | ಮಾಸಿಕ ₹ 10,000-15,000 |
ಉದ್ಯೋಗದ ಸ್ಥಳ | ವಿಜಯಪುರ, ಬಾಗಲಕೋಟೆ, ರಾಯಚೂರು |
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರೀಜನಲ್ ಮ್ಯಾನೇಜರ್
ಬ್ಯಾಂಕ್ ಆಫ್ ಬರೋಡಾ
ರೀಜನಲ್ ಆಫೀಸ್- ಗುಲ್ಬರ್ಗಾ
ನಂ-881-1-883-884
1st ಫ್ಲೋರ್
ಹಳೇ ಜೇವರ್ಗಿ ರಸ್ತೆ
ಸ್ಟೇಷನ್ ವಾರ್ಡ್
ಗುಲ್ಬರ್ಗಾ-585102
ಕರ್ನಾಟಕ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ