• ಹೋಂ
  • »
  • ನ್ಯೂಸ್
  • »
  • Jobs
  • »
  • Jobs in Bengaluru: ಕೆನರಾ ಬ್ಯಾಂಕ್​​ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ಡಿಗ್ರಿ ಆದವರಿಗೆ ಅವಕಾಶ

Jobs in Bengaluru: ಕೆನರಾ ಬ್ಯಾಂಕ್​​ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ಡಿಗ್ರಿ ಆದವರಿಗೆ ಅವಕಾಶ

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್

ಮೇ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

Canara Bank Recruitment 2023: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್​ ಆದ ಕೆನರಾ ಬ್ಯಾಂಕ್​​ನಲ್ಲಿ (Canara Bank) ಅನೇಕ ಫೈನಾನ್ಸಿಯಲ್ ಲಿಟರಸಿ ಕೌನ್ಸೆಲರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ಹುಡುಕಾಟದಲ್ಲಿದ್ದರೆ ಈಗಲೇ ಅರ್ಜಿ ಹಾಕಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೆನರಾ ಬ್ಯಾಂಕ್​​
ಹುದ್ದೆಫೈನಾನ್ಸಿಯಲ್ ಲಿಟರಸಿ ಕೌನ್ಸೆಲರ್
ವಿದ್ಯಾರ್ಹತೆಪದವಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 29, 2023

ವಿದ್ಯಾರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.




ವಯೋಮಿತಿ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 62 ವರ್ಷ ಮೀರಿರಬಾರದು.


ವೇತನ:
ನಿಗದಿಪಡಿಸಿಲ್ಲ.


ಉದ್ಯೋಗದ ಸ್ಥಳ:
ಬೆಂಗಳೂರು


ಇದನ್ನೂ ಓದಿ: IOCL Recruitment 2023: ಇಂಡಿಯನ್ ಆಯಿಲ್​​​​ನಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 1.60 ಲಕ್ಷ ಸಂಬಳ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ವ್ಯವಸ್ಥಾಪಕರು
ಕೆನರಾ ಬ್ಯಾಂಕ್
ಕೃಷಿ ಹಣಕಾಸು ಆದ್ಯತೆ
ವಲಯ ವಿಭಾಗ
#333, ಮಾತೃ ಆರ್ಕೇಡ್
2ನೇ ಮಹಡಿ, ಬಿಬಿ ರಸ್ತೆ
ದೇವನಹಳ್ಳಿ ಪಟ್ಟಣ-562110
ಬೆಂಗಳೂರು ಗ್ರಾಮಾಂತರ ಜಿಲ್ಲೆ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 29, 2023

top videos


    ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 22230215, 8749085391 ಗೆ ಸಂಪರ್ಕಿಸಿ.

    First published: