Canara Bank Recruitment 2023: ಬ್ಯಾಂಕಿಂಗ್ ಉದ್ಯೋಗ(Banking Job)ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಕೆನರಾ ಬ್ಯಾಂಕ್(Canara Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಚೀಫ್ ಡಿಜಿಟಲ್ ಆಫೀಸರ್, ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ಮಾರ್ಚ್ 6, 2023 ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೆನರಾ ಬ್ಯಾಂಕ್ |
ಹುದ್ದೆ | ಚೀಫ್ ಡಿಜಿಟಲ್ ಆಫೀಸರ್, ಚೀಫ್ ಟೆಕ್ನಾಲಜಿ ಆಫೀಸರ್ |
ಒಟ್ಟು ಹುದ್ದೆ | 3 |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ, ಬಿಇ/ಬಿ.ಟೆಕ್ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲುಕೊನೆಯ ದಿನ | ಮಾರ್ಚ್ 6, 2023 |
ಇದನ್ನೂ ಓದಿ: Karnataka Jobs: ಅನೇಕ SDA ಹುದ್ದೆಗಳಿಗೆ ಅರ್ಜಿ ಆಹ್ವಾನ- 30 ಸಾವಿರ ಸಂಬಳ, ಆಸಕ್ತರು ಅಪ್ಲೈ ಮಾಡಿ
ವಿದ್ಯಾರ್ಹತೆ:
ಗ್ರೂಪ್ ಚೀಫ್ ರಿಸ್ಕ್ ಆಫೀಸರ್(GCRO)- ಪದವಿ, ಸ್ನಾತಕೋತ್ತರ ಪದವಿ
ಚೀಫ್ ಡಿಜಿಟಲ್ ಆಫೀಸರ್(CDO)- ಬಿಇ/ಬಿ.ಟೆಕ್, ಎಂಸಿಎ
ಚೀಫ್ ಟೆಕ್ನಾಲಜಿ ಆಫೀಸರ್(CTO)- ಪದವಿ, ಬಿಇ/ಬಿ.ಟೆಕ್, ಎಂಸಿಎ
ವಯೋಮಿತಿ:
ಗ್ರೂಪ್ ಚೀಫ್ ರಿಸ್ಕ್ ಆಫೀಸರ್(GCRO)- 55 ವರ್ಷದೊಳಗಿರಬೇಕು
ಚೀಫ್ ಡಿಜಿಟಲ್ ಆಫೀಸರ್(CDO)- 40 ರಿಂದ 50 ವರ್ಷ
ಚೀಫ್ ಟೆಕ್ನಾಲಜಿ ಆಫೀಸರ್(CTO)- 40 ರಿಂದ 50 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Job Offer: ಪದವಿ, ಡಿಪ್ಲೊಮಾ ಆದವರಿಗೆ ಕೆಲಸ ಖಾಲಿ ಇದೆ- 1 ಲಕ್ಷ ಸಂಬಳ
ಉದ್ಯೋಗದ ಸ್ಥಳ:
ಬೆಂಗಳೂರು
ವೇತನ:
ನಿಗದಿಪಡಿಸಿಲ್ಲ.
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಶಾರ್ಟ್ಲಿಸ್ಟಿಂಗ್
ಇಂಟರ್ಯಾಕ್ಷನ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 6, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080 2211 6922 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ