CBHFL Recruitment 2023: ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್(Cent Bank Home Finance Limited -CBHFL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಕರೆಂಟ್ ಆಡಿಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಿ. ಮೇ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ |
ಹುದ್ದೆ | ಕನ್ಕರೆಂಟ್ ಆಡಿಟರ್ |
ವೇತನ | ಮಾಸಿಕ 15,000 |
ವಿದ್ಯಾರ್ಹತೆ | ಸಿಎ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 28, 2023 |
ವೇತನ:
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಲಕ್ನೋ, ನಾಸಿಕ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 28, 2023
ಇದನ್ನೂ ಓದಿ: Job Search: ಭಾರತೀಯ ನೌಕಾಪಡೆಯಲ್ಲಿ 100 ಅಗ್ನಿವೀರ್ ಹುದ್ದೆಗಳ ನೇಮಕ- SSLC ಪಾಸಾಗಿದ್ರೆ ಅಪ್ಲೈ ಮಾಡಿ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಲೆಕ್ಕಪರಿಶೋಧನಾ ಇಲಾಖೆ (CA ಸಂಸ್ಥೆಯ ಎಂಪಾನೆಲ್ಮೆಂಟ್)
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮುಂಬೈ
ಮುಖ್ಯ ಕಚೇರಿ ಕಟ್ಟಡ
6ನೇ ಮಹಡಿ
MG ರಸ್ತೆ
ಫೋರ್ಟ್
ಫ್ಲೋರಾ ಫೌಂಟೇನ್
ಹುತಾತ್ಮ ಚೌಕ್
ಮುಂಬೈ-400 023
ಅಥವಾ ಇ-ಮೇಲ್ ಐಡಿ enquiry@cbhfl.com ಗೆ ಕಳುಹಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ