Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(Central Bank of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 250 ಚೀಫ್ ಮ್ಯಾನೇಜರ್(Chief Manager), ಸೀನಿಯರ್ ಮ್ಯಾನೇಜರ್(Senior Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆ | ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ |
ಒಟ್ಟು ಹುದ್ದೆ | 250 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 63,840- 89,890 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 11, 2023 |
ಇದನ್ನೂ ಓದಿ: KMF ನೇರ ನೇಮಕಾತಿ- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- SSLC ಪಾಸಾದವರೂ ಅಪ್ಲೈ ಮಾಡಿ
ವಿದ್ಯಾರ್ಹತೆ:
ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಚೀಫ್ ಮ್ಯಾನೇಜರ್- 40 ವರ್ಷ
ಸೀನಿಯರ್ ಮ್ಯಾನೇಜರ್- 35 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST, 1984 ರ ಗಲಭೆಗಳಲ್ಲಿ ಮರಣ ಹೊಂದಿದವರ ಮಕ್ಕಳು/ಕುಟುಂಬದ ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 850 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಚೀಫ್ ಮ್ಯಾನೇಜರ್- ಮಾಸಿಕ ₹ 76,010- 89,890
ಸೀನಿಯರ್ ಮ್ಯಾನೇಜರ್- ಮಾಸಿಕ ₹ 63,840-78,230
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 11, 2023
ಆನ್ಲೈನ್ ಎಕ್ಸಾಂ ಮತ್ತು ಸಂದರ್ಶನ ನಡೆಯುವ ದಿನ: ಮಾರ್ಚ್ 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ