Central Bank of India Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 5000 ಅಪ್ರೆಂಟಿಸ್ (Apprentice) ಹುದ್ದೆಗಳು ಖಾಲಿ ಇವೆ. ಈ ಮೊದಲು ಏಪ್ರಿಲ್ 3, 2023 ಅರ್ಜಿ ಹಾಕಲು ಕೊನೆಯ ದಿನವಾಗಿತ್ತು. (Last Date). ಈಗ ಆ ದಿನಾಂಕವನ್ನು ಏಪ್ರಿಲ್ 21 ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಕರ್ನಾಟಕದಲ್ಲಿ 115 ಹುದ್ದೆಗಳು ಖಾಲಿ ಇವೆ. ಅಂತೆಯೇ ಬೇರೆ ಬೇರೆ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆ | ಅಪ್ರೆಂಟಿಸ್ |
ಒಟ್ಟು ಹುದ್ದೆ | 5000 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 10,000- 15,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 21, 2023 |
ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 31, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
PWBD ಅಭ್ಯರ್ಥಿಗಳು- 400 ರೂ.
SC/ST/ ಮಹಿಳಾ ಅಭ್ಯರ್ಥಿಗಳು- 600 ರೂ.
ಉಳಿದ ಅಭ್ಯರ್ಥಿಗಳು- 800 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಲಿಖಿತ ಪರೀಕ್ಷೆ
ಸ್ಥಳೀಯ ಭಾಷೆಯ ಪುರಾವೆ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ:
ಮಾಸಿಕ ₹ 10,000- 15,000
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 21, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ