DCC Bank Recruitment 2023: ಬೆಂಗಳೂರಿನ ಡಿಸಿಸಿ ಬ್ಯಾಂಕ್ನಲ್ಲಿ (DCC Bank) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ತಡಮಾಡದೇ ಈಗಲೇ ಅರ್ಜಿ ಹಾಕಿ. ಒಟ್ಟು 96 ಸ್ಟೆನೋಗ್ರಾಫರ್(Stenographer), ಕಂಪ್ಯೂಟರ್ ಆಪರೇಟರ್(Computer Operator), ಡ್ರೈವರ್(Driver) ಹುದ್ದೆಗಳು ಖಾಲಿ ಇವೆ. ಡಿಸಿಸಿ ಬ್ಯಾಂಕ್ನಲ್ಲಿ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಹೀಗಾಗಿ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಫೆಬ್ರವರಿ 28, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಂಗಳೂರಿನ ಡಿಸಿಸಿ ಬ್ಯಾಂಕ್ |
ಹುದ್ದೆ | ಸ್ಟೆನೋಗ್ರಾಫರ್, ಕಂಪ್ಯೂಟರ್ ಆಪರೇಟರ್ |
ಒಟ್ಟು ಹುದ್ದೆ | 96 |
ವಿದ್ಯಾರ್ಹತೆ | 10ನೇ ತರಗತಿ, ಪಿಯುಸಿ, ಡಿಪ್ಲೊಮಾ, ಪದವಿ |
ವೇತನ | ಮಾಸಿಕ ₹ 40,900-78,200 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 28, 2023 (ನಾಳೆ) |
ಇದನ್ನೂ ಓದಿ:JOBS: ಕಾಫಿ ಸಂಶೋಧನಾ ಸಂಸ್ಥೆಯಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ತಿಂಗಳಿಗೆ ₹ 25,000 ಸಂಬಳ
ವಿದ್ಯಾರ್ಹತೆ:
ಬ್ರಾಂಚ್ ಮ್ಯಾನೇಜರ್, ಸೀನಿಯರ್ ಅಸಿಸ್ಟೆಂಟ್- ಯಾವುದೇ ಪದವಿ
ಸ್ಟೆನೋಗ್ರಾಫರ್- ಪಿಯುಸಿ, ಕಮರ್ಷಿಯಲ್ ಪ್ರಾಕ್ಟೀಸ್ನಲ್ಲಿ ಡಿಪ್ಲೋಮಾ
ಜೂನಿಯರ್ ಅಸಿಸ್ಟೆಂಟ್ಸ್- ಪಿಯುಸಿ
ಕಂಪ್ಯೂಟರ್ ಆಪರೇಟರ್- ಪಿಯುಸಿ, ಕಮರ್ಷಿಯಲ್ ಪ್ರಾಕ್ಟೀಸ್ನಲ್ಲಿ ಡಿಪ್ಲೋಮಾ
ಡ್ರೈವರ್, ಗ್ರೂಪ್ ಡಿ-10 ನೇ ತರಗತಿ
ವಯೋಮಿತಿ:
ಅಭ್ಯರ್ಥಿಗಳು ವಯಸ್ಸು ಫೆಬ್ರವರಿ 28, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ & 3ಬಿ ಮತ್ತು ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
ಜನರಲ್, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 1500 ರೂ.
SC/ST ಅಭ್ಯರ್ಥಿಗಳು- 750 ರೂ.
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: Banking Jobs: ಡಿಗ್ರಿ ಮುಗಿಸಿದ್ರೆ ಬ್ಯಾಂಕ್ ಆಫ್ ಬರೋಡಾದಲ್ಲಿದೆ ಬಂಪರ್ ಉದ್ಯೋಗ- ಆಸಕ್ತರು ಅರ್ಜಿ ಹಾಕಿ
ವೇತನ:
ಬ್ರಾಂಚ್ ಮ್ಯಾನೇಜರ್- ಮಾಸಿಕ ₹ 40,900-78,200
ಸೀನಿಯರ್ ಅಸಿಸ್ಟೆಂಟ್- ಮಾಸಿಕ ₹ 37,900-70,850
ಸ್ಟೆನೋಗ್ರಾಫರ್- ಮಾಸಿಕ ₹ 37,900-70,850
ಜೂನಿಯರ್ ಅಸಿಸ್ಟೆಂಟ್ಸ್- ಮಾಸಿಕ ₹ 30,350- 58,250
ಕಂಪ್ಯೂಟರ್ ಆಪರೇಟರ್- ಮಾಸಿಕ ₹ 30,350- 58,250
ಡ್ರೈವರ್- ಮಾಸಿಕ ₹ 27,650-52,650
ಗ್ರೂಪ್ ಡಿ- ಮಾಸಿಕ ₹ 23,500-47,650
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/01/ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 28, 2023
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ನಿಗದಿತ ಅರ್ಹತಾ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ- 9036377735 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ