• ಹೋಂ
  • »
  • ನ್ಯೂಸ್
  • »
  • Jobs
  • »
  • Federal Bank Recruitment 2023: ಫೆಡರಲ್ ಬ್ಯಾಂಕ್​​ನಲ್ಲಿ ಬಂಪರ್ ಉದ್ಯೋಗಾವಕಾಶ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ

Federal Bank Recruitment 2023: ಫೆಡರಲ್ ಬ್ಯಾಂಕ್​​ನಲ್ಲಿ ಬಂಪರ್ ಉದ್ಯೋಗಾವಕಾಶ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಏಪ್ರಿಲ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.

  • News18 Kannada
  • 2-MIN READ
  • Last Updated :
  • New Delhi, India
  • Share this:

Federal Bank Recruitment 2023: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಫೆಡರಲ್ ಬ್ಯಾಂಕ್ (Federal Bank) ಸದ್ಯ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅನೇಕ ಫೈನಾನ್ಸಿಯಲ್ ಕ್ರೈಮ್ ಕಾಂಪ್ಲಿಯೆನ್ಸ್ ಸ್ಪೆಷಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಫೆಡರಲ್ ಬ್ಯಾಂಕ್
ಹುದ್ದೆಫೈನಾನ್ಸಿಯಲ್ ಕ್ರೈಮ್ ಕಾಂಪ್ಲಿಯೆನ್ಸ್ ಸ್ಪೆಷಲಿಸ್ಟ್
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ, ಎಂಬಿಎ
ವೇತನಮಾಸಿಕ ₹ 27,500
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 27, 2023

ವಿದ್ಯಾರ್ಹತೆ:
ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಾನೂನು ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: DOPT Recruitment 2023: ತಿಂಗಳಿಗೆ ಲಕ್ಷಗಟ್ಟಲೇ ಸಂಬಳ- ಸರ್ಕಾರಿ ನೌಕರಿಗೆ ನಾಳೆಯೊಳಗೆ ಅರ್ಜಿ ಹಾಕಿ


ವಯೋಮಿತಿ:
ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2023ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 100 ರೂ.
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಆನ್​ಲೈನ್


ವೇತನ:
ಮಾಸಿಕ ₹ 27,500


ಇದನ್ನೂ ಓದಿ: NHAI Recruitment 2023: ಪದವೀಧರರಿಗೆ ಬಂಪರ್ ಉದ್ಯೋಗ- ತಿಂಗಳಿಗೆ 2 ಲಕ್ಷದವರೆಗೆ ಸಂಬಳ


ಉದ್ಯೋಗದ ಸ್ಥಳ:
ಭಾರತ



ಆಯ್ಕೆ ಪ್ರಕ್ರಿಯೆ:
ಮಾಕ್ ಅಸೆಸ್ಮೆಂಟ್
ಆಪ್ಟಿಟ್ಯೂಡ್ ಅಸೆಸ್ಮೆಂಟ್
ಗುಂಪು ಚರ್ಚೆ
ವೈಯಕ್ತಿಕ ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 27, 2023

First published: