IDBI Bank Recruitment 2023: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ನಲ್ಲಿ (Industrial Development Bank of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಒಟ್ಟು 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಐಡಿಬಿಐ ಬ್ಯಾಂಕ್ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು. ಇಂದು ಅಂದರೆ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ |
ಹುದ್ದೆ | ಅಸಿಸ್ಟೆಂಟ್ ಮ್ಯಾನೇಜರ್ |
ಒಟ್ಟು ಹುದ್ದೆ | 600 |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 28, 2023 |
ಇದನ್ನೂ ಓದಿ: NIT ಕರ್ನಾಟಕದಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 31 ಸಾವಿರ ಸಂಬಳ
ವಿದ್ಯಾರ್ಹತೆ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST/ECO/SSCO/ ಮಾಜಿ ಸೈನಿಕ ಅಭ್ಯರ್ಥಿಗಳು- 5 ವರ್ಷ
ವೇತನ:
ನಿಗದಿಪಡಿಸಿಲ್ಲ.
ಇದನ್ನೂ ಓದಿ: JOB ALERT: 9 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ AIISH Mysore- ಇಲ್ಲಿ ಅಪ್ಲೈ ಮಾಡಿ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 200 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023(ಇಂದು)
ಆನ್ಲೈನ್ ಟೆಸ್ಟ್ ನಡೆಯುವ ದಿನಾಂಕ: ಏಪ್ರಿಲ್ 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ