Indbank Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಬಂಪರ್ ಜಾಬ್ ಇದೆ. ಇಂಡ್ಬ್ಯಾಂಕ್ ಮರ್ಚೆಂಟ್ ಬ್ಯಾಂಕಿಂಗ್ ಸರ್ವೀಸಸ್ ಲಿಮಿಟೆಡ್ (Indbank Merchant Banking Services Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 12 ಡೀಲರ್ (Dealer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date).
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡ್ ಬ್ಯಾಂಕ್ |
ಹುದ್ದೆ | ಡೀಲರ್ |
ಒಟ್ಟು ಹುದ್ದೆ | 12 |
ವಿದ್ಯಾರ್ಹತೆ | ಪದವಿ |
ವೇತನ | 3.50 ಲಕ್ಷ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 22, 2023 |
ಇದನ್ನೂ ಓದಿ: KAPL Recruitment 2023: ಕರ್ನಾಟಕ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ 65,000
ವಿದ್ಯಾರ್ಹತೆ:
ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. NISM / NCFM ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು.
ವೇತನ:
3.50 ಲಕ್ಷ ವಾರ್ಷಿಕ ಪ್ಯಾಕೇಜ್
ಉದ್ಯೋಗದ ಸ್ಥಳ:
ಕೊಲ್ಕತ್ತಾ, ವಾರಣಾಸಿ, ಕಾನ್ಪುರ, ಭುವನೇಶ್ವರ, ಜೈಪುರ, ಚಂಡೀಗಢ, ಇಂದೋರ್, ಸೂರತ್, ಲಕ್ನೋ, ಪುಣೆ, ಸಿಕಂದರಾಬಾದ್, ಪಂಜಾಬಿ ಬಾಘ್
ಇದನ್ನೂ ಓದಿ: Job Alert: ಹುಬ್ಬಳ್ಳಿಯಲ್ಲಿ ಸರ್ಕಾರಿ ಕೆಲಸ ಖಾಲಿ ಇದೆ- ಅರ್ಜಿ ಹಾಕಲು ಇವತ್ತೇ ಕೊನೆಯ ದಿನ
ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
480, 1ನೇ ಮಹಡಿ
ಖಿವರಾಜ್ ಕಾಂಪ್ಲೆಕ್ಸ್ 1
ಅಣ್ಣಾ ಸಲೈ
ನಂದನಂ
ಚೆನ್ನೈ - 600035
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ