Indusind Bank Recruitment 2023: ಇಂಡಸ್ಇಂಡ್ ಬ್ಯಾಂಕ್ನಲ್ಲಿ (Indusind Bank) ಕೆಲಸ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಬ್ಯಾಂಕಿಂಗ್ ಕೆಲಸ (Banking Job) ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಬೆಂಗಳೂರಿನ ಇಂಡಸ್ಇಂಡ್ ಬ್ಯಾಂಕ್ನಲ್ಲಿ ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (Business Development Manager) ಹುದ್ದೆ ಖಾಲಿ ಇದೆ. ನಾಳೆ ಅಂದರೆ ಮಾರ್ಚ್ 24 ಕ್ಕೆ ಬೆಂಗಳೂರಿನಲ್ಲಿ ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ನಾಳೆ ಬೆಳಗ್ಗೆ 10. 30ಕ್ಕೆ ಸಂದರ್ಶನ ನಡೆಯಲಿದೆ.
ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: Metro Jobs: ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 94 ಸಾವಿರ ಸಂಬಳ
ವಿದ್ಯಾರ್ಹತೆ:
ಇಂಡಸ್ಇಂಡ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ:
ಬೆಂಗಳೂರು
ವೇತನ:
2 ಲಕ್ಷ- 4.25 ಲಕ್ಷ (ವಾರ್ಷಿಕ ಪ್ಯಾಕೇಜ್)
ಅನುಭವ:
ಅಭ್ಯರ್ಥಿಗಳು ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
ಸಂದರ್ಶನ ನಡೆಯುವ ದಿನಾಂಕ & ಸಮಯ
ಮಾರ್ಚ್ 24, ಬೆಳಗ್ಗೆ 10.30 ರಿಂದ 5.30 ರವರೆಗೆ
ಸಂದರ್ಶನ ನಡೆಯುವ ಸ್ಥಳ:
ಇಂಡಸ್ಇಂಡ್ ಬ್ಯಾಂಕ್ ಲಿಮಿಟೆಡ್
ನಂ.87
ಬುಲ್ ಟೆಂಪಲ್ ರಸ್ತೆ
ಗವಿಪುರ ಬಡಾವಣೆ
ಬಸವನಗುಡಿ
ಬೆಂಗಳೂರು
ಕರ್ನಾಟಕ- 560004
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ