IPPB Recruitment 2023: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್(India Post Payments Bank-IPPB) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದೆ. ಒಟ್ಟು 41 ಜೂನಿಯರ್ ಅಸೋಸಿಯೇಟ್ (Junior Associate) ಮತ್ತು ಮ್ಯಾನೇಜರ್(Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2023 (ಇಂದು) ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ತಮ್ಮ ರೆಸ್ಯೂಮ್ನ್ನು ಮೇಲ್ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ |
ಹುದ್ದೆ | ಜೂನಿಯರ್ ಅಸೋಸಿಯೇಟ್ |
ಒಟ್ಟು ಹುದ್ದೆ | 41 |
ವಿದ್ಯಾರ್ಹತೆ | ಪದವಿ, ಬಿಇ/ಬಿ.ಟೆಕ್ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 28, 2023(ಇಂದು) |
ಇದನ್ನೂ ಓದಿ: Kalaburagi: ಟೈಪಿಸ್ಟ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 52 ಸಾವಿರ ಸಂಬಳ, 10th ಪಾಸಾದವರು Apply ಮಾಡಿ
ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿಸಿಎ/ಎಂಸಿಎ, ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ/ಬಿ.ಟೆಕ್, ಎಂಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಚೆನ್ನೈ, ದೆಹಲಿ, ಮುಂಬೈ, ಭಾರತದಲ್ಲಿ ಎಲ್ಲಿ ಬೇಕಾದರೂ
ಇದನ್ನೂ ಓದಿ: IDBI ಬ್ಯಾಂಕ್ನಲ್ಲಿ 600 ಹುದ್ದೆಗಳು ಖಾಲಿ- Apply ಮಾಡಲು ಇಲ್ಲಿ ಕ್ಲಿಕ್ ಮಾಡಿ, ಇವತ್ತೇ ಲಾಸ್ಟ್ ಡೇಟ್
ಆಯ್ಕೆ ಪ್ರಕ್ರಿಯೆ:
ಗ್ರೂಪ್ ಡಿಸ್ಕಶನ್
ಆನ್ಲೈನ್ ಟೆಸ್ಟ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ careers@ippbonline.in ಗೆ ಫೆಬ್ರವರಿ 28, 2023ರೊಳಗೆ ಕಳುಹಿಸಬೇಕು.
ಮೇಲ್ ಕಳುಹಿಸುವಾಗ Subject ಬರೆಯುವಾಗ ಹುದ್ದೆಯ ಹೆಸರು ಮತ್ತು ಹುದ್ದೆಯ ಕ್ರಮ ಸಂಖ್ಯೆಯನ್ನು ನಮೂದಿಸಬೇಕು.
ಉದಾ: "APPLICATION FOR THE POST OF _____________________"
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023 (ಇಂದು)
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್(IPPB) ಭಾರತೀಯ ಅಂಚೆ ಇಲಾಖೆಯ ವಿಭಾಗವಾಗಿದೆ. ಅಂಚೆ ಇಲಾಖೆಯು ಭಾರತ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಭಾರತೀಯ ಅಂಚೆ ಇಲಾಖೆಯ ಮಾಲೀಕತ್ವದಲ್ಲಿದೆ. 2018 ರಲ್ಲಿ ಪ್ರಾರಂಭವಾದ IPPB ಜನವರಿ 2022ರ ಹೊತ್ತಿಗೆ 5 ಕೋಟಿಗೂ ಹೆಚ್ಚು ಗ್ರಾಹಕರನ್ನು
ಹೊಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ