Kolar Chikballapura DCC Bank Recruitment 2023: ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(Kolar Chikballapura DCC Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 36 ಅಕೌಂಟೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 16, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ |
ಹುದ್ದೆ | ಅಕೌಂಟೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಡ್ರೈವರ್ |
ಒಟ್ಟು ಹುದ್ದೆ | 36 |
ವಿದ್ಯಾರ್ಹತೆ | 10ನೇ ತರಗತಿ, 12ನೇ ತರಗತಿ, ಪದವಿ |
ವೇತನ | ಮಾಸಿಕ ₹ 36,000-67,550 |
ಉದ್ಯೋಗದ ಸ್ಥಳ | ಕೋಲಾರ, ಚಿಕ್ಕಬಳ್ಳಾಪುರ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 16, 2023 |
ಇದನ್ನೂ ಓದಿ: Karnataka Water Resources Department Recruitment 2023: ಜಲಸಂಪನ್ಮೂಲ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 16, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ:
ಅಕೌಂಟೆಂಟ್- ಮಾಸಿಕ ₹ 36,000-67,550
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 33,450- 62,600
ಡ್ರೈವರ್- ಮಾಸಿಕ ₹ 27,650- 52,650
ಜವಾನ- ಮಾಸಿಕ ₹ 23,500- 47,650
ಇದನ್ನೂ ಓದಿ: BBMP Recruitment 2023: ಬಿಬಿಎಂಪಿಯಲ್ಲಿ ಖಾಲಿ ಇರುವ 49 ಹುದ್ದೆಗಳಿಗೆ ನಾಳೆಯೇ ಸಂದರ್ಶನ
ವಯೋಮಿತಿ ಸಡಿಲಿಕೆ:
ಒಬಿಸಿ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳು- 3 ವರ್ಷ
SC/ST/ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
ಜನರಲ್/ ಒಬಿಸಿ ಅಭ್ಯರ್ಥಿಗಳು- 1000 ರೂ.
SC/ST/ ಪ್ರವರ್ಗ-1/PH/ ಮಾಜಿ ಸೈನಿಕ/ ವಿಧವಾ ಅಭ್ಯರ್ಥಿಗಳು- 500 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 16, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮಾರ್ಚ್ 16, 2023
ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ ಸಂಖ್ಯೆ 9036072155 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ