• Home
  • »
  • News
  • »
  • jobs
  • »
  • PNB Recruitment 2023: ಪಂಜಾಬ್​ ನ್ಯಾಷನಲ್ ಬ್ಯಾಂಕ್​ನಲ್ಲಿ 12 ಹುದ್ದೆಗಳಿಗೆ ಅರ್ಜಿ ಆಹ್ವಾನ- ಸಂಬಳ 15 ಲಕ್ಷ

PNB Recruitment 2023: ಪಂಜಾಬ್​ ನ್ಯಾಷನಲ್ ಬ್ಯಾಂಕ್​ನಲ್ಲಿ 12 ಹುದ್ದೆಗಳಿಗೆ ಅರ್ಜಿ ಆಹ್ವಾನ- ಸಂಬಳ 15 ಲಕ್ಷ

ಪಂಜಾಬ್ ನ್ಯಾಷನಲ್ ಬ್ಯಾಂಕ್

ಪಂಜಾಬ್ ನ್ಯಾಷನಲ್ ಬ್ಯಾಂಕ್

ಅರ್ಜಿ ಸಲ್ಲಿಸಲು ಡಿಸೆಂಬರ್ 23, 2022 ಕೊನೆಯ ದಿನ(Last Date)ವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • Share this:

    PNB Recruitment 2023: ಪಂಜಾಬ್​ ನ್ಯಾಷನಲ್ ಬ್ಯಾಂಕ್(Punjab National Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 12 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್, ಸೀನಿಯರ್ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಡಿಸೆಂಬರ್ 23, 2022 ಕೊನೆಯ ದಿನ(Last Date)ವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಪಂಜಾಬ್​ ನ್ಯಾಷನಲ್ ಬ್ಯಾಂಕ್
    ಹುದ್ದೆಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್, ಸೀನಿಯರ್ ಡಿಫೆನ್ಸ್​ ಬ್ಯಾಂಕಿಂಗ್ ಅಡ್ವೈಸರ್
    ಒಟ್ಟು ಹುದ್ದೆ12
    ವೇತನವಾರ್ಷಿಕ ಪ್ಯಾಕೇಜ್ 14,40,000-15,60,000
    ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ


    ಹುದ್ದೆಯ ಮಾಹಿತಿ:
    ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- 3
    ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್-9


    ವಯೋಮಿತಿ:
    ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- ಗರಿಷ್ಠ 60 ವರ್ಷ
    ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- ಗರಿಷ್ಠ 58 ವರ್ಷ


    ವೇತನ:
    ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್- ಮಾಸಿಕ ₹15,60,000 (ವಾರ್ಷಿಕ ಪ್ಯಾಕೇಜ್)
    ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್-ಮಾಸಿಕ ₹14,40,000 (ವಾರ್ಷಿಕ ಪ್ಯಾಕೇಜ್)


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ- 07/12/2022
    ಅರ್ಜಿ ಸಲ್ಲಿಸಲು ಕೊನೆ ದಿನ- 23/12/2022

    Published by:Latha CG
    First published: