ReBIT Recruitment 2023: ರಿಸರ್ವ್ ಬ್ಯಾಂಕ್ ಇನ್ಫರ್ಮೇಶನ್ ಟೆಕ್ನಾಲಜಿ (Reserve Bank Information Technology) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಆರ್ಕಿಟೆಕ್ಟ್- ಪ್ಲಾಟ್ಫಾರ್ಮ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮತ್ತು ಮುಂಬೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಿಸರ್ವ್ ಬ್ಯಾಂಕ್ ಇನ್ಫರ್ಮೇಶನ್ ಟೆಕ್ನಾಲಜಿ |
ಹುದ್ದೆ | ಆರ್ಕಿಟೆಕ್ಟ್- ಪ್ಲಾಟ್ಫಾರ್ಮ್ |
ವಿದ್ಯಾರ್ಹತೆ | ಬಿಇ/ ಬಿ.ಟೆಕ್ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಂಗಳೂರು, ಮುಂಬೈ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 30, 2023 |
ಇದನ್ನೂ ಓದಿ: KITS Recruitment 2023: ಕರ್ನಾಟಕ ಸರ್ಕಾರ ಅರ್ಜಿ ಆಹ್ವಾನಿಸಿರುವ 7 ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ- 45 ಸಾವಿರ ಸಂಬಳ
ಉದ್ಯೋಗದ ಸ್ಥಳ:
ರಿಸರ್ವ್ ಬ್ಯಾಂಕ್ ಇನ್ಫರ್ಮೇಶನ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮುಂಬೈ ಮತ್ತು ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ನೋಟಿಫಿಕೇಶನ್ಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 30, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ