SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ ನೇಮಕಾತಿಯು ಬ್ಯುಸಿನೆಸ್ ರೆಪ್ರೆಸೆಂಟೇಟೀವ್ ಫೆಸಿಲಿಟೇಟರ್(Business Representative Facilitator) ಹುದ್ದೆಗಳಿಗೆ ಇರುತ್ತದೆ. ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಂದು ಅಂದರೆ ಮಾರ್ಚ್ 31, 2023 ಆಗಿರುತ್ತದೆ.
ಈ ಹುದ್ದೆಗಳಿಗೆ ನೇಮಕಾತಿ:
ಹುದ್ದೆ | ಬ್ಯುಸಿನೆಸ್ ರೆಪ್ರೆಸೆಂಟೇಟೀವ್ ಫೆಸಿಲಿಟೇಟರ್ |
ಒಟ್ಟು ಹುದ್ದೆ | 868 |
ವೇತನ | ಮಾಸಿಕ ₹ 40,000 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮಾರ್ಚ್ 31, 2023 |
ಶೈಕ್ಷಣಿಕ ಅರ್ಹತೆ ಮತ್ತು ಅನುಭವ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಪದವಿವರೆಗಿನ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: JOBS: ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ಕೆಲಸಕ್ಕೆ ಅರ್ಜಿ ಹಾಕಿ
ಅಭ್ಯರ್ಥಿಯು ಎಸ್‌ಬಿಐನಿಂದ ನಿವೃತ್ತ ಅಧಿಕಾರಿಯಾಗಿರಬೇಕು.
ಅಲ್ಲದೆ ಅಧಿಸೂಚನೆಯಲ್ಲಿ ನೀಡಿರುವ ಎಲ್ಲಾ ಅರ್ಹತೆಗಳನ್ನು ಹೊಂದಿರುವುದು ಅವಶ್ಯಕ.
ಅಭ್ಯರ್ಥಿಗಳು ಸಂಬಂಧಿತ ಹುದ್ದೆಯ ಕನಿಷ್ಠ ಅನುಭವವನ್ನು ಹೊಂದಿರಬೇಕು.
ಅಭ್ಯರ್ಥಿಗಳು ಹುದ್ದೆಯ ಎಲ್ಲಾ ನಿಯಮಗಳು ಮತ್ತು ಷರತ್ತುಗಳನ್ನು ಪೂರೈಸಿರಬೇಕು.
ವಯಸ್ಸಿನ ಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 63 ವರ್ಷದಿಂದ 65 ವರ್ಷ ವಯಸ್ಸಿನವರಾಗಿರಬೇಕು.
ಅಗತ್ಯ ದಾಖಲಾತಿಗಳು:
ರೆಸ್ಯೂಮ್ (ಬಯೋಡೇಟಾ)
10ನೇ, 12ನೇ ಮತ್ತು ಪದವಿ ಪ್ರಮಾಣಪತ್ರಗಳು
ಶಾಲೆ ಬಿಡುವ ಪ್ರಮಾಣಪತ್ರ
ಜಾತಿ ಪ್ರಮಾಣಪತ್ರ (ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ)
ಗುರುತಿನ ಚೀಟಿ (ಆಧಾರ್ ಕಾರ್ಡ್, ಪರವಾನಗಿ)
ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ನೋಟಿಫಿಕೇಶನ್ ಇಲ್ಲಿದೆ- SBI- ನೋಟಿಫಿಕೇಶನ್
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲಿಗೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ನಂತರ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ