South Indian Bank Ltd Recruitment 2023: ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್(South Indian Bank Ltd) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪ್ರೊಬೆಶನರಿ ಕ್ಲರ್ಕ್, ನ್ಯಾಷನಲ್ ಹೆಡ್ ಹುದ್ದೆಗಳು(Posts) ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ಫೆಬ್ರವರಿ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ, ಬ್ಯಾಂಕಿಂಗ್ ಉದ್ಯೋಗ ಗಿಟ್ಟಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್ |
ಹುದ್ದೆ | ಪ್ರೊಬೆಶನರಿ ಕ್ಲರ್ಕ್, ನ್ಯಾಷನಲ್ ಹೆಡ್ |
ವಿದ್ಯಾರ್ಹತೆ | ಪದವಿ, ಎಂಜಿನಿಯರಿಂಗದ |
ವೇತನ | ಮಾಸಿಕ ₹17,900- 47,920 |
ವಯೋಮಿತಿ | 26- 50 ವರ್ಷ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 12, 2023 |
ಪ್ರೊಬೆಶನರಿ ಕ್ಲರ್ಕ್- 10ನೇ ತರಗತಿ, ಪಿಯುಸಿ, ಡಿಪ್ಲೊಮಾ, ಯಾವುದೇ ವಿಷಯದಲ್ಲಿ ಪದವಿ
ನ್ಯಾಷನಲ್ ಹೆಡ್- ಬಿಇ/ ಬಿ.ಟೆಕ್, ಬಿ.ಆರ್ಕ್ ಇನ್ ಸಿವಿಲ್ ಎಂಜಿನಿಯರಿಂಗ್
ಇದನ್ನೂ ಓದಿ: DHFWS ಹಾವೇರಿ: ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವಯೋಮಿತಿ:
ಪ್ರೊಬೆಶನರಿ ಕ್ಲರ್ಕ್- ಗರಿಷ್ಠ 50 ವರ್ಷ
ನ್ಯಾಷನಲ್ ಹೆಡ್- ಗರಿಷ್ಠ 26 ವರ್ಷ
ವೇತನ:
ಮಾಸಿಕ ₹17,900- 47,920
ಅರ್ಜಿ ಶುಲ್ಕ:
ಜನರಲ್ ಅಭ್ಯರ್ಥಿಗಳು- 800 ರೂ.
SC/ST ಅಭ್ಯರ್ಥಿಗಳು- 200 ರೂ.
ಪಾವತಿಸುವ ಬಗೆ- ಆನ್ಲೈನ್
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 12, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ