Bank of Baroda Recruitment 2021: ಬ್ಯಾಂಕ್ ಆಫ್ ಬರೋಡ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಡಾಟಾ ಸೈಂಟಿಸ್ಟ್(Data Scientist), ಡಾಟಾ ಎಂಜಿನಿಯರ್(Data Engineer) ಹುದ್ದೆಗಳು ಖಾಲಿ ಇದ್ದು, ಪದವಿ, ಬಿಇ, ಬಿ ಟೆಕ್, ಎಂ ಟೆಕ್, ಎಂಇ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 6ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಬರೋಡ(Bank of Baroda)ದ ಅಧಿಕೃತ ವೆಬ್ಸೈಟ್ www.bankofbaroda.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಬ್ಯಾಂಕ್ ಆಫ್ ಬರೋಡಾ |
ಹುದ್ದೆಯ ಹೆಸರು |
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ |
ಒಟ್ಟು ಹುದ್ದೆಗಳು |
15 ಹುದ್ದೆಗಳು |
ವಿದ್ಯಾರ್ಹತೆ |
ಪದವಿ, ಬಿಇ, ಬಿ ಟೆಕ್, ಎಂ ಟೆಕ್, ಎಂಇ |
ಉದ್ಯೋಗದ ಸ್ಥಳ |
ಭಾರತದಲ್ಲಿ ಎಲ್ಲಿ ಬೇಕಾದರೂ |
ವೇತನ |
ಮಾಸಿಕ ₹ 48,170-89,890 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
16/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
06/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/12/2021
ಇದನ್ನೂ ಓದಿ: Rashtrapati Bhawan Recruitment 2021: ತಿಂಗಳಿಗೆ ₹ 29,200 ಸಂಬಳ; SSLC ಪಾಸಾದವರಿಗೆ ರಾಷ್ಟ್ರಪತಿ ಭವನದಲ್ಲಿ ಉದ್ಯೋಗ
ಅರ್ಜಿ ಶುಲ್ಕ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ಮತ್ತು EWS ಅಭ್ಯರ್ಥಿಗಳು 600 ರೂಪಾಯಿ ಅರ್ಜಿ ಶುಲ್ಕ ಕಟ್ಟಬೇಕು.
SC/ST/PWD ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆಯ ಮಾಹಿತಿ:
ಡಾಟಾ ಸೈಂಟಿಸ್ಟ್ -09
ಡಾಟಾ ಎಂಜಿನಿಯರ್ -06
ವಿದ್ಯಾರ್ಹತೆ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಯಾವುದೇ ಪದವಿ/ ಬಿಇ/ ಬಿ ಟೆಕ್/ ಎಂ ಟೆಕ್/ ಎಂಇ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25-40 ವರ್ಷದೊಳಗಿರಬೇಕು.
ವೇತನ:
ಡಾಟಾ ಸೈಂಟಿಸ್ಟ್, ಡಾಟಾ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 48,170-89,890 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: Ministry of Culture Recruitment 2021: ಸಂಸ್ಕೃತಿ ಸಚಿವಾಲಯದಲ್ಲಿ ಉಪಕುಲಪತಿ ಹುದ್ದೆ ಖಾಲಿ; ಮಾಸಿಕ ವೇತನ ₹ 2,10,000
ಆಯ್ಕೆ ಪ್ರಕ್ರಿಯೆ:
- ದಾಖಲಾತಿ ಪರಿಶೀಲನೆ
- ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ