Banking Jobs: ಬ್ಯಾಂಕ್ ಆಫ್ ಬರೋಡಾದಲ್ಲಿ 105 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 85,000

ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್​​ 24ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಂಕ್ ಆಫ್​ ಬರೋಡಾ

ಬ್ಯಾಂಕ್ ಆಫ್​ ಬರೋಡಾ

  • Share this:
Bank of Baroda Recruitment 2022: ಬ್ಯಾಂಕ್ ಆಫ್​ ಬರೋಡಾ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 105 ಸ್ಪೆಷಲಿಸ್ಟ್​ ಆಫೀಸರ್(Specialist Officer)​ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್​​ 24ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್​ ಆಫ್​ ಬರೋಡ(Bank of Baroda)ದ ಅಧಿಕೃತ ವೆಬ್​ಸೈಟ್​​ www.bankofbaroda.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಬ್ಯಾಂಕ್ ಆಫ್​ ಬರೋಡಾ
ಹುದ್ದೆಯ ಹೆಸರು ಸ್ಪೆಷಲಿಸ್ಟ್​ ಆಫೀಸರ್ ​
ಒಟ್ಟು ಹುದ್ದೆಗಳು105
ವಿದ್ಯಾರ್ಹತೆಬಿಇ, ಬಿ.ಟೆಕ್, ಬಿಎಸ್ಸಿ, ಬಿಸಿಎ, ಸಿಎ, ಎಂಸಿಎ, ಸಿಎಂಎ, ಪಿಜಿ ಡಿಪ್ಲೋಮಾ
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ವೇತನಮಾಸಿಕ ₹48,170-84,890
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ04/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24/03/2022

 ಅರ್ಜಿ ಶುಲ್ಕ:
SC/ST/PWD/ ಮಹಿಳಾ ಅಭ್ಯರ್ಥಿಗಳಿಗೆ- 100 ರೂ.
ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ- 600 ರೂ.

ಇದನ್ನೂ ಓದಿ:Government Job: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, SSLC ಪಾಸಾದವರಿಗೂ ಅವಕಾಶ

ಹುದ್ದೆಯ ಮಾಹಿತಿ:
ಮ್ಯಾನೇಜರ್- ಡಿಜಿಟಲ್ ಫ್ರಾಡ್- 15
ಕ್ರೆಡಿಟ್ ಆಫೀಸರ್-40
ಕ್ರೆಡಿಟ್ ಆಫೀಸರ್(ಎಕ್ಸ್​ಪೋರ್ಟ್​/ಇಂಪೋರ್ಟ್​ ಬ್ಯುಸಿನೆಸ್)- 20
ಫಾರೆಕ್ಸ್​-30

ವಿದ್ಯಾರ್ಹತೆ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ, ಬಿಸಿಎ, ಸಿಎ, ಎಂಸಿಎ, ಸಿಎಂಎ, ಪಿಜಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 24-40 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ: JOBS: ಡಿಪ್ಲೋಮಾ, ITI ಪಾಸಾದವರಿಗೆ BHELನಲ್ಲಿ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ವೇತನ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹48,170-84,890 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಟೆಸ್ಟ್
ಗ್ರೂಪ್ ಡಿಶ್ಕಸನ್/ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/03/2022
Published by:Latha CG
First published: