BOB Recruitment: ಬ್ಯಾಂಕ್​ ಆಫ್​ ಬರೋಡದಲ್ಲಿ ನೇಮಕಾತಿ; ಮೈಸೂರಿನಲ್ಲಿ ಉದ್ಯೋಗ

ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದೆ.

ಬ್ಯಾಂಕ್​ ಆಫ್​ ಬರೋಡಾದಲ್ಲಿ ಅರ್ಜಿ ಹಾಕಿ

ಬ್ಯಾಂಕ್​ ಆಫ್​ ಬರೋಡಾದಲ್ಲಿ ಅರ್ಜಿ ಹಾಕಿ

  • Share this:
    ಬ್ಯಾಂಕ್​ ಆಫ್​ ಬರೋಡದಲ್ಲಿ (Bank Of Baroda) ಎರಡು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರಿನ ಕಚೇರಿಯಲ್ಲಿ ಬಿಸಿನೆಸ್​ ಕರೆಸ್ಪಾಂಡೆಂಟ್​ ಸೂಪರ್​ವೈಸರ್ (Business Correspondent Supervisor)​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಬ್ಯಾಂಕ್ ಹೆಸರುಬ್ಯಾಂಕ್ ಆಫ್ ಬರೋಡಾ (BOB)
    ಹುದ್ದೆಯ ಹೆಸರುಬಿಸಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್​
    ಹುದ್ದೆಗಳ ಸಂಖ್ಯೆ2
    ಉದ್ಯೋಗ ಸ್ಥಳಮೈಸೂರು
    ವೇತನ8000-15000 ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಸಿಎ, ಎಂಬಿಎ, ಬಿಇ ಅಥವಾ ಎಂಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಡಿಆರ್​ಡಿಒದಲ್ಲಿ 1901 ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ನೇಮಕಾತಿ ಸಂಪೂರ್ಣ ಮಾಹಿತಿ

    ವಯಸ್ಸಿನ ಮಿತಿ: ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಬ್ಯಾಂಕ್ ಆಫ್ ಬರೋಡಾ ನಿಯಮಗಳ ಪ್ರಕಾರ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ
    ಸಂದರ್ಶನ

    ಅರ್ಜಿ ಸಲ್ಲಿಕೆ ವಿಳಾಸ
    ಪ್ರಾದೇಶಿಕ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾ, ಪ್ರಾದೇಶಿಕ ಕಚೇರಿ, ಮೈಸೂರು, ಬರೋಡಾ ಸೌಧ, ನಂ-ವೈ, 17ನೇ ಮುಖ್ಯ, 15ನೇ ಅಡ್ಡರಸ್ತೆ, ವಿಶ್ವಮಾನವ ಡಬಲ್ ರೋಡ್, ಸರಸ್ವತಿಪುರಂ, ಮೈಸೂರು-570023

    ಇದನ್ನು ಓದಿ: ಗೂಗಲ್​ನಲ್ಲಿ ಫ್ರೆಶರ್ಸ್​ಗೆ ಉದ್ಯೋಗಾವಕಾಶ; ವಾರ್ಷಿಕ 10 ಲಕ್ಷ ರೂ ಪ್ಯಾಕೇಜ್​

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಸೆಪ್ಟೆಂಬರ್​​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಅಕ್ಟೋಬರ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bankofbaroda.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೂ ಮುನ್ನ ಸಲ್ಲಿಸಿ.
    Published by:Seema R
    First published: