SBI Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1226 ಸರ್ಕಲ್ ಬೇಸ್ಡ್ ಆಫೀಸರ್(Circle Based Officer) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಎಸ್ಬಿಐನ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆಯ ಹೆಸರು |
ಸರ್ಕಲ್ ಬೇಸ್ಡ್ ಆಫೀಸರ್(CBO) |
ಹುದ್ದೆಗಳ ಸಂಖ್ಯೆ |
1226 |
ವಿದ್ಯಾರ್ಹತೆ |
ಯಾವುದೇ ಪದವಿ |
ಉದ್ಯೋಗದ ಸ್ಥಳ |
ಭಾರತ |
ವೇತನ |
ಮಾಸಿಕ ₹ 36,000-63,840 |
ಅರ್ಜಿ ಸಲ್ಲಿಸುವ ಬಗೆ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
09/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
29/12/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/12/2021
ಇದನ್ನೂ ಓದಿ: Government Job: ಪೋಸ್ಟ್ ಆಫೀಸ್ನಲ್ಲಿ ಕೆಲಸ ಖಾಲಿ ಇದೆ, SSLC, PUC ಪಾಸಾದವರು ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/EWS- 750 ರೂ. ಅರ್ಜಿ ಶುಲ್ಕ
SC/ST/ PWD- ಯಾವುದೇ ಅರ್ಜಿ ಶುಲ್ಕ ಇಲ್ಲ.
ವಿದ್ಯಾರ್ಹತೆ:
ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ಇದನ್ನೂ ಓದಿ: BMRCL Recruitment 2021: ತಿಂಗಳಿಗೆ ₹ 63,490 ಸಂಬಳ, SSLC, ಡಿಪ್ಲೊಮಾ ಪಾಸಾದವರಿಗೆ ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ
ವಯೋಮಿತಿ:
ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು.
ವೇತನ:
ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 36,000-63,840 ವೇತನ ನೀಡಲಾಗುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ಸ್ಕ್ರೀನಿಂಗ್
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ