Banking Jobs: ಕರ್ನಾಟಕ ಬ್ಯಾಂಕ್ ನೇಮಕಾತಿ, ಮಾಸಿಕ ವೇತನ 1 ಲಕ್ಷ, ಮಂಗಳೂರಿನಲ್ಲಿ ಉದ್ಯೋಗ

ಮಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಆಫ್​ಲೈನ್(Offline)​ ಮೂಲಕ ಜನವರಿ 20ರೊಳಗೆ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ಬ್ಯಾಂಕ್

ಕರ್ನಾಟಕ ಬ್ಯಾಂಕ್

  • Share this:
Karnataka Bank Recruitment 2022: ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್(Manager) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಆಫ್​ಲೈನ್(Offline)​ ಮೂಲಕ ಜನವರಿ 20ರೊಳಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ karnatakabank.com ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಕರ್ನಾಟಕ ಬ್ಯಾಂಕ್
ಹುದ್ದೆಯ ಹೆಸರುಮ್ಯಾನೇಜರ್
ವಿದ್ಯಾರ್ಹತೆಚಾರ್ಟರ್ಡ್​ ಅಕೌಂಟೆಂಟ್-CA
ವಯೋಮಿತಿ30 ವರ್ಷ
ವೇತನಮಾಸಿಕ ₹ 1,00,500
ಉದ್ಯೋಗದ ಸ್ಥಳಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ ಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ04/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20/01/2022



ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಡಿಸೆಂಬರ್ 31, 2021ಕ್ಕೆ 30 ವರ್ಷಗಳಾಗಿರಬೇಕು.

ಇದನ್ನೂ ಓದಿ: Government Job: ಹಾಸನ ಜಿಲ್ಲಾ ಪಂಚಾಯತ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ವಯೋಮಿತಿ ಸಡಿಲಿಕೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು: 400 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 600 ರೂ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಆಯ್ಕೆ ಪ್ರಕ್ರಿಯೆ:
ಅರ್ಹತಾ ಮಾನದಂಡ
ಸಂದರ್ಶನ

ಇದನ್ನೂ ಓದಿ: Bengaluru Metro Jobs: ತಿಂಗಳಿಗೆ ₹ 60,000 ಸಂಬಳ, ಬೆಂಗಳೂರು ಮೆಟ್ರೋದಲ್ಲಿ 50 ಹುದ್ದೆಗಳು ಖಾಲಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/01/2022

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR)
ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಪ್ರಧಾನ ಕಛೇರಿ
ಮಹಾವೀರ ಸರ್ಕಲ್
ಕಂಕನಾಡಿ
ಮಂಗಳೂರು- 575002
Published by:Latha CG
First published: