BBMP Recruitment 2021: ತಿಂಗಳಿಗೆ ₹50,000 ಸಂಬಳ, ಬಿಬಿಎಂಪಿಯಲ್ಲಿ ಹಲವು ಹುದ್ದೆಗಳು ಖಾಲಿ, ನೇರ ನೇಮಕಾತಿ

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ಮತ್ತು ನವೆಂಬರ್ 16 ರಂದು ನಡೆಯಲಿರುವ ನೇರ ಸಂದರ್ಶನ(Direct Interview)ದಲ್ಲಿ ಪಾಲ್ಗೊಳ್ಳಬಹುದು.

BBMP

BBMP

  • Share this:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhath Bengaluru Mahanagara Palike-BBMP) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 4 ಮ್ಯಾನೇಜರ್(Manager) ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ(Epidemiologist ) ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ(Walk-in-Interview) ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ಮತ್ತು ನವೆಂಬರ್ 16 ರಂದು ನಡೆಯಲಿರುವ ನೇರ ಸಂದರ್ಶನ(Direct Interview)ದಲ್ಲಿ ಪಾಲ್ಗೊಳ್ಳಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

































ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಯ ಹೆಸರು ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ
ಒಟ್ಟು ಹುದ್ದೆಗಳು 94
ವಿದ್ಯಾರ್ಹತೆ ಎಂಬಿಎ, ಎಂ.ಕಾಂ, ಬಿ.ಇ/ಬಿಸಿಎ, ಎಂಬಿಬಿಎಸ್, ಎಂಎಸ್ಸಿ
ವೇತನ ಮಾಸಿಕ ₹50,000
ಆಯ್ಕೆ ವಿಧಾನ ಸಂದರ್ಶನ
ಸಂದರ್ಶನದ ದಿನಾಂಕ ನವೆಂಬರ್ 15 & 16, 2021



ವಿದ್ಯಾರ್ಹತೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ/ಸಂಸ್ಥೆ/ಬೋರ್ಡ್​​ನಿಂದ ಎಂಬಿಎ, ಎಂ.ಕಾಂ, ಬಿ.ಇ/ಬಿಸಿಎ, ಎಂಬಿಬಿಎಸ್ ಪದವಿ ಮತ್ತು ಎಂ.ಎಸ್ಸಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಈ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ:Indian Telephone Industries Limited 2021: ಐಟಿಐ ನೇಮಕಾತಿ, ತಿಂಗಳಿಗೆ ₹ 72,717 ಸಂಬಳ, BE, B.Tech ಅಭ್ಯರ್ಥಿಗಳಿಗೆ ಅವಕಾಶ

ವಯೋಮಿತಿ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000/- ರಿಂದ 50,000/-ರೂ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ಮ್ಯಾನೇಜರ್ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಸಿದ್ದಮಾಡಿಕೊಂಡು, ನವೆಂಬರ್ 15,2021 ಮತ್ತು ನವೆಂಬರ್ 16,2021ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ:Indian Air Force Recruitment 2021: ತಿಂಗಳಿಗೆ ₹25,500 ಸಂಬಳ, 10ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗ 

ಸಂದರ್ಶನ ನಡೆಯುವ ಸ್ಥಳ:

ಮುಖ್ಯ ಆರೋಗ್ಯಾಧಿಕಾರಿಗಳು,
ಅನೆಕ್ಸ್ ಕಟ್ಟಡ,
ಬಿ.ಬಿ.ಎಂ.ಪಿ ಕೇಂದ್ರ ಕಛೇರಿ,
ಎನ್‌.ಆರ್‌.ಚೌಕ,
ಬೆಂಗಳೂರು-02.



ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: