ಪೌರಕಾರ್ಮಿಕರ ಹುದ್ದೆಗಳ (BBMP recruitment) ಭರ್ತಿಗೆ 3,673 ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜ.16ರಿಂದ 30ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯ ಅಧಿಸೂಚನೆಯನ್ನು ಬಿಬಿಎಂಪಿಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಾಲಿಕೆಯ ಆಯಾ ವಾರ್ಡ್ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ಕಚೇರಿಯಲ್ಲಿ ಅರ್ಜಿ (Application) ಪಡೆದು ಭರ್ತಿ ಮಾಡಿ ಅದೇ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಗೆ ಸಲ್ಲಿಕೆ ಮಾಡಬೇಕು. ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜ.30 ಸಂಜೆ 5ರ ಒಳಗೆ ಭರ್ತಿ ಮಾಡಿದ ಅರ್ಜಿ ಹಾಗೂ ಸೂಚಿಸಿದ ದಾಖಲೆಗಳೊಂದಿಗೆ ಸಲ್ಲಿಸಬೇಕು.
2 ವರ್ಷ ಕನಿಷ್ಠ ಸೇವೆ ಕಡ್ಡಾಯ
ಕನಿಷ್ಠ ಎರಡು ವರ್ಷ ಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸಿದ ಪೌರಕಾರ್ಮಿಕರು ಕಾಯಂಗೊಳಿಸುವ ನೇಮಕಾತಿ ವೇಳೆ ಅರ್ಜಿ ಸಲ್ಲಿಸಲ್ಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸುವ ವೇಳೆ ಕಡ್ಡಾಯವಾಗಿ ನೇರ ವೇತನ ಪಾವತಿ ಪಡೆದ ದಾಖಲಾತಿ, ಪಿಎಫ್, ಇಎಸ್ಐ ದಾಖಲಾತಿ, ಏಜೆನ್ಸಿ ಮೂಲಕ ವೇತನ ಪಡೆದ ದಾಖಲಾತಿಯನ್ನು ಸಲ್ಲಿಸಬೇಕು. ಹುಟ್ಟಿದ ದಿನಾಂಕ ಮತ್ತು ಸೇವಾವಧಿ ಒಂದೇ ಆಗಿದ್ದರೆ ಲಾಟರಿ ಮೂಲಕ ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಕನ್ನಡ ಭಾಷೆ ಮಾತನಾಡಬೇಕು.
ಇದನ್ನೂ ಓದಿ: ಹಾಸನದಲ್ಲಿ ಟೀಚರ್ ಜಾಬ್ ಖಾಲಿ ಇದೆ, ನೀವೂ ಅಪ್ಲೈ ಮಾಡಬಹುದು
ಪೌರಕಾರ್ಮಿಕರ ಕಾಯಂಗೆ ಕನ್ನಡ ಭಾಷೆ ಮಾತನಾಡುವುದಕ್ಕೆ ತಿಳಿದಿರಬೇಕು. ಹಾಗೆಯೇ ದೈಹಿಕ ದೃಢತೆಯು ಇರಬೇಕು. ಈ ಬಗ್ಗೆ ಸರ್ಕಾರಿ ಆಸ್ಪತ್ರೆಯಿಂದ ವೈದ್ಯಕೀಯ ಪ್ರಮಾಣ ಸಲ್ಲಿಕೆ ಮಾಡಬೇಕು.
ಉದ್ಯೋಗ | BBMP recruitment |
ಅರ್ಜಿ | ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜ.30 ಸಂಜೆ 5ರ ಒಳಗೆ ಭರ್ತಿ ಮಾಡಿದ ಅರ್ಜಿ ಹಾಗೂ ಸೂಚಿಸಿದ ದಾಖಲೆಗಳೊಂದಿಗೆ ಸಲ್ಲಿಸಬೇಕು. |
ವೇತನ | 28,950 |
ಪೌರಕಾರ್ಮಿಕರಿಗೆ .17 ಸಾವಿರದಿಂದ .28,950 ರವರೆಗೆ ವೇತನ ನಿಗದಿ ಪಡಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಕಾಯಂಗೊಳಿಸುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ