BECIL Recruitment 2021: ತಿಂಗಳಿಗೆ ₹ 35,000 ಸಂಬಳ; LLB ಪಾಸಾದವರಿಗೆ ಬಂಪರ್ ಉದ್ಯೋಗ

ಜೂನಿಯರ್ ಟೆಕ್ನಿಕಲ್ ಆಫೀಸರ್ ಮತ್ತು ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ BAMS/BUMS/BSMS/LLB ಪೂರ್ಣಗೊಳಿಸಿರಬೇಕು.

BECIL

BECIL

  • Share this:
BECIL Recruitment 2021: ಬ್ರೋಡ್​ಕಾಸ್ಟ್​ ಎಂಜಿನಿಯರಿಂಗ್​ ಕನ್ಸಲ್ಟೆಂಟ್ಸ್​ ಇಂಡಿಯಾ ಲಿಮಿಟೆಡ್(The Broadcast Engineering Consultants India Ltd)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಲೀಗಲ್ ಆಫೀಸರ್, ಜೂನಿಯರ್ ಟೆಕ್ನಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, LLB, BUMS, BAMS ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 25ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬ್ರೋಡ್​ಕಾಸ್ಟ್​ ಎಂಜಿನಿಯರಿಂಗ್​ ಕನ್ಸಲ್ಟೆಂಟ್ಸ್​ ಇಂಡಿಯಾ ಲಿಮಿಟೆಡ್
ಹುದ್ದೆಯ ಹೆಸರುಲೀಗಲ್ ಆಫೀಸರ್, ಜೂನಿಯರ್ ಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆಗಳು13
ವಿದ್ಯಾರ್ಹತೆLLB, BUMS, BAMS
ಉದ್ಯೋಗದ ಸ್ಥಳನವದೆಹಲಿ
ವೇತನಮಾಸಿಕ ₹ 35,000
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ25/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/12/2021ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/12/2021

ಇದನ್ನೂ ಓದಿ: RLDA Recruitment 2021: ತಿಂಗಳಿಗೆ ₹ 54,600 ಸಂಬಳ, ರೈಲ್ವೆ ಇಲಾಖೆಯಲ್ಲಿ BE, B Tech ಆದವರಿಗೆ ಉದ್ಯೋಗ

ಅರ್ಜಿ ಶುಲ್ಕ:

ಸಾಮಾನ್ಯ/ಒಬಿಸಿ/ ಮಹಿಳಾ/ ಮಾಜಿ ಸೈನಿಕ- 750 ರೂ. ಅರ್ಜಿ ಶುಲ್ಕ
SC/ST/EWS/PH ಅಭ್ಯರ್ಥಿಗಳಿಗೆ - 450 ರೂ.ಅರ್ಜಿ ಶುಲ್ಕ

ಹುದ್ದೆಯ ಮಾಹಿತಿ:

ಜೂನಿಯರ್ ಟೆಕ್ನಿಕಲ್ ಆಫೀಸರ್-11
ಲೀಗಲ್ ಆಫೀಸರ್- 02
ಒಟ್ಟು -13 ಹುದ್ದೆಗಳು

ವಿದ್ಯಾರ್ಹತೆ:

ಜೂನಿಯರ್ ಟೆಕ್ನಿಕಲ್ ಆಫೀಸರ್ ಮತ್ತು ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ BAMS/BUMS/BSMS/LLB ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:

ಜೂನಿಯರ್ ಟೆಕ್ನಿಕಲ್ ಆಫೀಸರ್ ಮತ್ತು ಲೀಗಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: BEL Recruitment 2021: ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 1,20,000

ವೇತನ:

ಜೂನಿಯರ್ ಟೆಕ್ನಿಕಲ್ ಆಫೀಸರ್ ಮತ್ತು ಲೀಗಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,000 ವೇತನ ನೀಡಲಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: