BECIL Recruitment 2021: ಬ್ರೋಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(The Broadcast Engineering Consultants India Ltd) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ, MLT ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 14ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ರೋಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ www.becil.com ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಬ್ರೋಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ |
ಹುದ್ದೆಯ ಹೆಸರು |
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ |
ಒಟ್ಟು ಹುದ್ದೆಗಳು |
5 |
ವಿದ್ಯಾರ್ಹತೆ |
ಬಿಎಸ್ಸಿ, MLT |
ಉದ್ಯೋಗದ ಸ್ಥಳ |
ನೋಯ್ಡಾ |
ವೇತನ |
ಮಾಸಿಕ ₹ 21,970 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
14/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
25/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/12/2021
ಇದನ್ನೂ ಓದಿ: ಗ್ರೇಡ್-7 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 1,45,000, BE, B Tech ಆದವರಿಗೆ ಅವಕಾಶ
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ
SC/ST/EWS/PH ಅಭ್ಯರ್ಥಿಗಳಿಗೆ 450 ರೂ. ಅರ್ಜಿ ಶುಲ್ಕ
ವಿದ್ಯಾರ್ಹತೆ:
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಬಿಎಸ್ಸಿ/ಎಂಎಲ್ಟಿ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಉದ್ಯೋಗ ನೀಡಲಾಗುತ್ತದೆ.
ಇದನ್ನೂ ಓದಿ: Nava Bharath Fertilizers Recruitment: 80 ಸೇಲ್ಸ್ ರೆಪ್ರೆಸೆಂಟೇಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ, PUC ಆದವರು ಅಪ್ಲೈ ಮಾಡಿ
ವೇತನ:
ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,970 ವೇತನ ನೀಡಲಾಗುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ