BEL Recruitment 2021: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharath Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 73 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharath Electronics Limited)ನ ಅಪ್ರೆಂಟಿಸ್ ಟ್ರೈನಿಂಗ್ ಬೋರ್ಡ್(Apprentice Training Board)ನ ಅಧಿಕೃತ ವೆಬ್ಸೈಟ್ boat-srp.com ಗೆ ಭೇಟಿ ನೀಡಬಹುದು.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 25, 2021 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಅಪ್ರೆಂಟಿಸ್ |
ಒಟ್ಟು ಹುದ್ದೆಗಳು |
73 |
ವಿದ್ಯಾರ್ಹತೆ |
ಡಿಪ್ಲೋಮಾ, ಎಂಜಿನಿಯರಿಂಗ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
25/11/2021 |
ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್ - 63 ಹುದ್ದೆಗಳು
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ - 10 ಹುದ್ದೆಗಳು
ಇದನ್ನೂ ಓದಿ:BSF Recruitment 2021: ಮಾಸಿಕ ವೇತನ ₹ 2,15,900; ಗಡಿ ಭದ್ರತಾ ಪಡೆಯಲ್ಲಿ ಗ್ರೂಪ್ A, B, C ಹುದ್ದೆಗಳು ಖಾಲಿ
ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
ಡಿಪ್ಲೋಮಾ ಅಪ್ರೆಂಟಿಸ್: ಎಂಜಿನಿಯರಿಂಗ್ನಲ್ಲಿ ಡಿಪ್ಲೋಮಾ ಮಾಡಿರಬೇಕು.
ಆಯ್ಕೆ ಪ್ರಕ್ರಿಯೆ:
BELನ ಅಧಿಕೃತ ಅಧಿಸೂಚನೆಯ ಪ್ರಕಾರ, "ಆಯಾ ವಿಭಾಗಗಳಿಗೆ ಅನ್ವಯವಾಗುವಂತೆ ಮೂಲ ನಿಗದಿತ ಅರ್ಹತೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಮಾಡಲಾಗುವುದು. ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು ಅವರ ನೋಂದಾಯಿತ ಇಮೇಲ್ ಐಡಿ ಮೂಲಕ ತಿಳಿಸಲಾಗುತ್ತದೆ. ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು ಚೆನ್ನೈನಲ್ಲಿ ಮಾಡಲಾಗುತ್ತದೆ‘‘.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/10/2021
- NATS ಪೋರ್ಟಲ್ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಲು ಕಡೆಯ ದಿನಾಂಕ: 10/11/2021
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2021
- ಶಾರ್ಟ್ಲಿಸ್ಟ್ ಬಿಡುಗಡೆ ಮಾಡುವ ದಿನಾಂಕ: 30/11/2021
- ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ದಿನಾಂಕ: ಡಿಸೆಂಬರ್ 8 & 9, 2021
ಇದನ್ನೂ ಓದಿ:IOCL Recruitment 2021: ಇಂಡಿಯಲ್ ಆಯಿಲ್ ಕಾರ್ಪೊರೇಷನ್ನಲ್ಲಿ 527 ಹುದ್ದೆಗಳು ಖಾಲಿ, ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು
www.boatsrp.com ನಲ್ಲಿ ಪ್ರಕಟಿಸಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ