BEL Recruitment 2021: ತಿಂಗಳಿಗೆ ₹ 1,60,000 ಸಂಬಳ; BE, B Tech ಅಭ್ಯರ್ಥಿಗಳಿಗೆ BELನಲ್ಲಿ ಉದ್ಯೋಗ

ಇಂದಿನಿಂದ (ನವೆಂಬರ್ 16ರಿಂದ) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಬಿಇಎಲ್

ಬಿಇಎಲ್

  • Share this:
BEL Recruitment 2021: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited-BEL)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ರಿಸರ್ಚ್​ ಸ್ಟಾಫ್​(Research Staff) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್(BE, B. Tech)​ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದ (ನವೆಂಬರ್ 16ರಿಂದ) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ BEL ನ ಅಧಿಕೃತ ವೆಬ್​ಸೈಟ್​​ bel-india.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಯ ಹೆಸರುರಿಸರ್ಚ್​ ಸ್ಟಾಫ್​
ಒಟ್ಟು ಹುದ್ದೆಗಳು10
ವಿದ್ಯಾರ್ಹತೆಬಿಇ, ಬಿ.ಟೆಕ್
ಉದ್ಯೋಗದ ಸ್ಥಳಘಾಜಿಯಾಬಾದ್
ವೇತನಮಾಸಿಕ ₹ 50,000-1,60,000
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ16/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08/12/2021



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/12/2021

ಇದನ್ನೂ ಓದಿ: KPSC Recruitment 2021: ತಿಂಗಳಿಗೆ ₹ 48,000 ಸಂಬಳ, SSLC ಪಾಸಾದವರಿಗೆ ಬಂಪರ್ ಉದ್ಯೋಗ

ಅರ್ಜಿ ಶುಲ್ಕ:

ರಿಸರ್ಚ್​ ಸ್ಟಾಫ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕ ಪಾವತಿಸಬೇಕು.
SC, ST, PWD ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಹತೆ:

ರಿಸರ್ಚ್​ ಸ್ಟಾಫ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು. (ಕಂಪ್ಯೂಟರ್ ಸೈನ್ಸ್​​/ ಕಂಪ್ಯೂಟರ್​ ಸೈನ್ಸ್​ & ಎಂಜಿನಿಯರಿಂಗ್/ ಕಂಪ್ಯೂಟರ್​ ಸೈನ್ಸ್​​ ಎಂಜಿನಿಯರಿಂಗ್)

ಅನುಭವ:

ರಿಸರ್ಚ್​ ಸ್ಟಾಫ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ C++, ಜಾವಾ, ಪೈಥಾನ್, ಅಲ್ಗಾರಿಥಮ್ ಡೆವಲಪ್​ಮೆಂಟ್​​, SW ಡಾಂಕ್ಯುಮೆಂಟೇಶನ್, SW ಟೆಸ್ಟಿಂಗ್​ ಮತ್ತು ಬಿಗ್ ಡಾಟಾ ಅನಾಲಿಟಿಕ್ಸ್​​ನಲ್ಲಿ 4 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ರಿಸರ್ಚ್​ ಸ್ಟಾಫ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:

ರಿಸರ್ಚ್​ ಸ್ಟಾಫ್​ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಗಾಜಿಯಾಬಾದ್​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನದ ವಿವರ:

ರಿಸರ್ಚ್​ ಸ್ಟಾಫ್​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 50,000-1,60,000 ದವರೆಗೆ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: LIC Recruitment 2021: ತಿಂಗಳಿಗೆ ₹ 25,000 ಸಂಬಳ, ಪದವಿ ಪಾಸಾದವರಿಗೆ LICಯಲ್ಲಿ Part-Time ಉದ್ಯೋಗ

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ

  • ದಾಖಲಾತಿ ಪರಿಶೀಲನೆ

  • ವೈಯಕ್ತಿಕ ಸಂದರ್ಶನ




ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: