BEL Recruitment 2021: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited -BEL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್(Senior Assistant Engineer) ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ ಪೂರ್ಣಗೊಳಿಸಿ, ಸೇವೆಯಿಂದ ನಿವೃತ್ತರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 26ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಆಫ್ಲೈನ್(Offline/Postal) ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ BEL ನ ಅಧಿಕೃತ ವೆಬ್ಸೈಟ್ bel-india.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ |
ಒಟ್ಟು ಹುದ್ದೆಗಳು |
20 |
ವಿದ್ಯಾರ್ಹತೆ |
ಡಿಪ್ಲೋಮಾ, ನಿವೃತ್ತಿ ಹೊಂದಿರುವವರು |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 30,000-1,20,000 |
ಅರ್ಜಿ ಸಲ್ಲಿಸುವ ವಿಧಾನ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
26/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
11/12/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 26/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11/12/2021
ಇದನ್ನೂ ಓದಿ: RLDA Recruitment 2021: ತಿಂಗಳಿಗೆ ₹ 54,600 ಸಂಬಳ, ರೈಲ್ವೆ ಇಲಾಖೆಯಲ್ಲಿ BE, B Tech ಆದವರಿಗೆ ಉದ್ಯೋಗ
ಹುದ್ದೆಯ ಮಾಹಿತಿ:
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ (CSS)E- 1 ಗ್ರೇಡ್- 19
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ (WFS/ PS) E- 1 ಗ್ರೇಡ್- 01
ಒಟ್ಟು 20 ಹುದ್ದೆಗಳು
ವಿದ್ಯಾರ್ಹತೆ:
ನೌಕಾಪಡೆ/ವಾಯುಪಡೆ/ಸೇನೆ/ ಕೋಸ್ಟ್ ಗಾರ್ಡ್ ಸೇವೆಯಿಂದ ನಿವೃತ್ತಿ ಹೊಂದಿರಬೇಕು.
ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಷನ್/ ಟೆಲಿ-ಕಮ್ಯುನಿಕೇಷನ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕಲ್/ ಎಲೆಕ್ಟ್ರಾನಿಕಲ್ & ಎಲೆಕ್ಟ್ರಾನಿಕ್ಸ್ನಲ್ಲಿ 3 ವರ್ಷಗಳ ಡಿಪ್ಲೋಮಾ ಪದವಿ ಪೂರ್ಣಗೊಳಿಸರಬೇಕು.
JCO ಶ್ರೇಣಿಯಲ್ಲಿ 15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವೃತ್ತಿಪರ ಅನುಭವ ಹೊಂದಿರಬೇಕು.
ವಯೋಮಿತಿ:
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 50 ವರ್ಷ ವಯಸ್ಸಾಗಿರಬೇಕು.
ಉದ್ಯೋಗದ ಸ್ಥಳ:
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 30,000-1,20,000 ದವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ:HPCL Recruitment 2021: ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 25,000
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಸೀನಿಯರ್ ಡಿಜಿಎಂ(HR), ನಾವಲ್ ಸಿಸ್ಟಮ್ಸ್ SBU,
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು - 560013
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ