BELನಲ್ಲಿ ವಿವಿಧ ಹುದ್ದೆಗಳು ಖಾಲಿ, ತಿಂಗಳಿಗೆ ₹ 1,60,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ

ಜನವರಿ 13 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited -BEL) ಖಾಲಿ ಇರುವ   ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಇಎಲ್​ನಲ್ಲಿ ಒಟ್ಟು 03 ಅಸಿಸ್ಟೆಂಟ್​ ಕಂಪನಿ ಸೆಕ್ರೆಟರಿ, ಅಸಿಸ್ಟೆಂಟ್​ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. LLB, ಬಿಎಲ್, LLM  ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 13 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಬಿಇಎಲ್(BEL)​ನ ಅಧಿಕೃತ ವೆಬ್​ಸೈಟ್​ bel-india.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​
ಹುದ್ದೆಯ ಹೆಸರುಅಸಿಸ್ಟೆಂಟ್​ ಕಂಪನಿ ಸೆಕ್ರೆಟರಿ, ಅಸಿಸ್ಟೆಂಟ್​ ಮ್ಯಾನೇಜರ್
ಒಟ್ಟು ಹುದ್ದೆಗಳು03
ವಿದ್ಯಾರ್ಹತೆLLB, ಬಿಎಲ್, LLM
ಉದ್ಯೋಗದ ಸ್ಥಳಬೆಂಗಳೂರು
ಸಂಬಳಮಾಸಿಕ ₹ 50,000-1,60,000
ಅರ್ಜಿ ಸಲ್ಲಿಸುವ ವಿಧಾನಆಫ್​ ​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05/02/2022

ಹುದ್ದೆಯ ಮಾಹಿತಿ:

ಅಸಿಸ್ಟೆಂಟ್​ ಕಂಪನಿ ಸೆಕ್ರೆಟರಿ- 1
ಅಸಿಸ್ಟೆಂಟ್​ ಮ್ಯಾನೇಜರ್- 2

ಇದನ್ನೂ ಓದಿ: Government Job: ಸೆಬಿಯಲ್ಲಿ 120 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ, ತಿಂಗಳಿಗೆ ₹ 55,000 ಸಂಬಳ

ವಿದ್ಯಾರ್ಹತೆ:

ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್​ ಕಂಪನಿ ಸೆಕ್ರೆಟರಿ, ಅಸಿಸ್ಟೆಂಟ್​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ LLB, ಬಿಎಲ್, LLM ಪೂರ್ಣಗೊಳಿಸಿರಬೇಕು.

ವಯೋಮಿತಿ:

ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್​ ಕಂಪನಿ ಸೆಕ್ರೆಟರಿ, ಅಸಿಸ್ಟೆಂಟ್​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2021ಕ್ಕೆ 32 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್​ ಕಂಪನಿ ಸೆಕ್ರೆಟರಿ, ಅಸಿಸ್ಟೆಂಟ್​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ಇದನ್ನೂ ಓದಿ: Karnataka Jobs: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 1419 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 1,41,300

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/02/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ
ಸಂದರ್ಶನ
Published by:Latha CG
First published: