• Home
  • »
  • News
  • »
  • jobs
  • »
  • BEL Recruitment 2022: 360 ಅಪ್ರೆಂಟಿಸ್ ಹುದ್ದೆಗಳು ಖಾಲಿ, BE, B Tech ಆದವರು ಅರ್ಜಿ ಸಲ್ಲಿಸಿ

BEL Recruitment 2022: 360 ಅಪ್ರೆಂಟಿಸ್ ಹುದ್ದೆಗಳು ಖಾಲಿ, BE, B Tech ಆದವರು ಅರ್ಜಿ ಸಲ್ಲಿಸಿ

BEL

BEL

ಫೆಬ್ರವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್​​ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

  • Share this:

BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited -BEL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಇಎಲ್​ನಲ್ಲಿ ಒಟ್ಟು 360 ಗ್ರಾಜುಯೇಟ್ ಅಪ್ರೆಂಟಿಸ್(Graduate Apprentice), ಟೆಕ್ನಿಷಿಯನ್ ಅಪ್ರೆಂಟಿಸ್(Technician Apprentice) ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬಿಇ, ಬಿ.ಟೆಕ್, ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್​​ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಬಿಇಎಲ್(BEL)​ನ ಅಧಿಕೃತ ವೆಬ್​ಸೈಟ್​ bel-india.in ಗೆ ಭೇಟಿ ನೀಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಯ ಹೆಸರುಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು360
ವಿದ್ಯಾರ್ಹತೆಬಿಇ, ಬಿ.ಟೆಕ್, ಡಿಪ್ಲೋಮಾ
ಉದ್ಯೋಗದ ಸ್ಥಳಬೆಂಗಳೂರು
ವೇತನಮಾಸಿಕ ₹ 10,400-11,110
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ23/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ13/03/2022

ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್- 100
ಟೆಕ್ನಿಷಿಯನ್ ಅಪ್ರೆಂಟಿಸ್- 260
ಒಟ್ಟು 360 ಹುದ್ದೆಗಳು


ಇದನ್ನೂ ಓದಿ: BSNL Recruitment 2022: ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಪ್ಲೋಮಾ ಆದವರು Apply ಮಾಡಿ


ವಿದ್ಯಾರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.


ಉದ್ಯೋಗದ ಸ್ಥಳ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.


ವೇತನ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 10,400-11,110 ವೇತನ ನೀಡಲಾಗುತ್ತದೆ.


ಇದನ್ನೂ ಓದಿ: Government Job: ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ


ಆಯ್ಕೆ ಪ್ರಕ್ರಿಯೆ:
ಶಾರ್ಟ್​​ಲಿಸ್ಟಿಂಗ್​
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/03/2022

Published by:Latha CG
First published: