Jobs in BEL: ಬಿಇಎಲ್​ನಲ್ಲಿ 50 ಅಪ್ರೆಂಟಿಸ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಲಿಖಿತ ಪರೀಕ್ಷೆ ಇಲ್ಲ

ಒಂದು ವರ್ಷದ ಅಪ್ರೆಂಟಿಸ್​ ಕೋರ್ಸ್​ ಇದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

6 ಹುದ್ದೆಗೆ ಅರ್ಜಿ ಹಾಕಿ

6 ಹುದ್ದೆಗೆ ಅರ್ಜಿ ಹಾಕಿ

  • Share this:
    ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನಲ್ಲಿ (Bharat Electronics Limited_ 50 ಗ್ರಾಜುಯೇಟ್​ ಅಪ್ರೆಂಟಿಸ್ (Graduates Apprentice)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅಪ್ರೆಂಟಿಸ್​ ಕೋರ್ಸ್​ ಇದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ವೇಳೆ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್​ ಕೂಡ ನೀಡಲಾಗುವುದು. ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಅರ್ಜಿ ಭರ್ತಿ ಮಾಡಬೇಕಾಗಿದ್ದು, ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 19 ಸೆಪ್ಟೆಂಬರ್​ ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
    ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ: 50
    ಉದ್ಯೋಗ ಸ್ಥಳ: ಗಾಜಿಯಾಬಾದ್ - ಉತ್ತರ ಪ್ರದೇಶ
    ಸ್ಟೈಪೆಂಡ್: 11100 ರೂ. ಪ್ರತಿ ತಿಂಗಳು























    ಹುದ್ದೆಹುದ್ದೆ ಸಂಖ್ಯೆ
    ಮೆಕ್ಯಾನಿಕಲ್ ಇಂಜಿನಿಯರಿಂಗ್20
    ಕಂಪ್ಯೂಟರ್ ಸೈನ್ಸ್10
    ಎಲೆಕ್ಟ್ರಾನಿಕ್ಸ್10
    ಸಿವಿಲ್ ಇಂಜಿನಿಯರಿಂಗ್10

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ ಅಥವಾ ಬಿಟೆಕ್​​ ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ದೂರಸಂಪರ್ಕ ಇಲಾಖೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗಾವಕಾಶ; ತಿಂಗಳಿಗೆ 75 ಸಾವಿರ ರೂ ವೇತನ

    ವಯಸ್ಸಿನ ಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಮತ್ತು ಒಬಿಸಿ ಅಭ್ಯರ್ಥಿಗಳು: 5 ವರ್ಷಗಳು

    ಅರ್ಜಿ ಶುಲ್ಕ:
    ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಸೆಪ್ಟೆಂಬರ್​ 2022

     ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bel-india.in

    ಇದನ್ನು ಓದಿ: ಪ್ರಾಜೆಕ್ಟ್​ ಸೂಪರ್​ವೈಸರ್​ ಹುದ್ದೆಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: