ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ (Bharat Electronics Limited) ಟ್ರೈನಿ ಆಫೀಸರ್ (Trainee Officer) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ.
ಇನ್ನು ಈ ಹುದ್ದೆಯನ್ನು ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ನಳಂದ- ಬಿಇಎಲ್ ಅಕಾಡೆಮಿ ಫಾರ್ ಎಕ್ಸಲೆನ್ಸ್ನ ತರಬೇತಿ ಅಕಾಡೆಮಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಹುದ್ದೆ ಮಾಹಿತಿ |
ಹುದ್ದೆ ವಿವರ |
ಸಂಸ್ಥೆಯ ಹೆಸರು |
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಟ್ರೈನಿ ಆಫೀಸರ್-I |
ಹುದ್ದೆಗಳ ಸಂಖ್ಯೆ |
1 |
ಉದ್ಯೋಗ ಸ್ಥಳ |
ಬೆಂಗಳೂರು |
ವೇತನ |
30000-40000 ರೂ. ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಲೈಬ್ರರಿ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅನುಭವದ ವಿವರಗಳು
ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಸಂಬಂಧಿತ ಹುದ್ದೆ ಸಂಬಂಧ ಅಭ್ಯರ್ಥಿಯು ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.
ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳಾಗಿರಬೇಕು.
ಇದನ್ನು ಓದಿ: ಬೆಳಗಾವಿಯಲ್ಲಿದೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆ; ಪಿಯುಸಿ ಆದವರಿಗೆ ಅವಕಾಶ
ವಯೋಮಿತಿ ಸಡಿಲಿಕೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ
ಪ. ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು: 150 ರೂ.
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05- ಜುಲೈ 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
bel-india.in
ಇದನ್ನು ಓದಿ: 3,708 ಅತಿಥಿ ಉಪನ್ಯಾಸಕರ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ವೆಬ್ಸೈಟ್ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮ್ಯಾನೇಜರ್ (HRD/BAE), ನಳಂದ - BEL ಅಕಾಡೆಮಿ ಫಾರ್ ಎಕ್ಸಲೆನ್ಸ್, ಕುವೆಂಪು ಸರ್ಕಲ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು - 560013
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ